Advertisement

ಮಂಗಳೂರು: ಆ. 14ರ ವರೆಗೆ ಸೆಕ್ಷನ್‌ 144 ಮುಂದುವರಿಕೆ

08:34 PM Aug 07, 2022 | Team Udayavani |

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಹೇರಿದ್ದ ನಿರ್ಬಂಧಗಳನ್ನು  ಸಡಿಲಿಕೆ ಮಾಡಲಾಗಿದೆ. ಆದರೆ ಸೆಕ್ಷನ್ 144 ಅನ್ನು ಆಗಸ್ಟ್ 14 ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Advertisement

ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳು, ಪ್ರತಿಕೃತಿಗಳನ್ನು ಸುಡುವುದು ಅಥವಾ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಭಟ್ಕಳ: ಮಳೆ ಹಾನಿ ನಷ್ಟದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಅಂಗಡಿಗಳ ಮುಚ್ಚುವಿಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿದ್ದಾರೆ. ಮದ್ಯದಂಗಡಿಗಳು ಸೇರಿದಂತೆ ಎಲ್ಲಾ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು.  ಅಂಗಡಿ ಮುಚ್ಚುವಿಕೆಯ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next