Advertisement

ಸಮ್ಮೇಳನಕ್ಕೆ ಸರ್ವ ಸಹಕಾರ: ತೇಲ್ಕೂರ

08:21 PM Dec 28, 2021 | Team Udayavani |

ಕಲಬುರಗಿ: ಬರುವ ಜನವರಿ 3 ಹಾಗೂ 4ರಂದು ನಡೆಯಲಿರುವ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಸರ್ವ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್‌ ತೇಲ್ಕೂರ ಹೇಳಿದರು.

Advertisement

ಸಮ್ಮೇಳನದ ಆಮಂತ್ರಣ ಸ್ವೀಕರಿಸಿದ ಅವರು, ಪತ್ರಕರ್ತರ ಸಮ್ಮೇಳನ ನಮ್ಮೆಲ್ಲರ ಹಬ್ಬವಾಗಿದೆ. ಉದ್ಘಾಟನೆಗೆ ಮುಖ್ಯಮಂತ್ರಿ ಆಗಮಿಸುತ್ತಿದ್ದು, ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವರು ಎಂದರು. ಸಮ್ಮೇಳನಕ್ಕೆ ಬರುವ ಪ್ರತಿನಿ ಧಿಗಳಿಗೆ ಹಾಗೂ ಸಮ್ಮೇಳನಕ್ಕೆ ಬರುವವರಿಗೆ ಅನುಕೂಲವಾಗಲು ನಿಗಮದಿಂದ ಬಸ್‌ ಸೌಕರ್ಯ ಕಲ್ಪಿಸಲಾಗುವುದು. ಸಮ್ಮೇಳನದ ಸಿದ್ದತೆಗಳ ಕುರಿತು ಸಂಘದ ಪದಾಧಿ ಕಾರಿಗಳೊಂದಿಗೆ ಚರ್ಚಿಸಿದ ಶಾಸಕ ತೇಲ್ಕೂರ, ಸಮ್ಮೇಳನದ ಸಿದ್ಧತೆಯಲ್ಲಿ ಯಾವುದೇ ಕೊರತೆ ಆಗಬಾರದು ಎಂದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ್‌, ಪ್ರಧಾನ ಕಾಯದರ್ಶಿ ದೇವಿಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು. ಸಮ್ಮೇಳನ ಯಶಸ್ಸಿಗಾಗಿ ಉಪ ಸಮಿತಿ ರಚಿಸಲಾಗಿದ್ದು, ಎಲ್ಲ ಉಪ ಸಮಿತಿಗಳು ಕಾರ್ಯೋನ್ಮುಖಗೊಂಡಿದ್ದು, ಸಮಿತಿಯ ಸದಸ್ಯರು ಸಮ್ಮೇಳನದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next