Advertisement

ಎಲ್ಲ ಶಾಲೆಗಳೂ ಕನ್ನಡ ಬೋಧಿಸಲಿ

11:43 AM Nov 30, 2017 | Team Udayavani |

ಬೆಂಗಳೂರು: ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಒಪ್ಪದ ಕೇಂದ್ರೀಯ ವಿದ್ಯಾಲಯಗಳ ವಿರುದ್ಧ ಸೂಕ್ತ ಕ್ರಮಕ್ಕಾಗಿ ಸಾರ್ವಜನಿಕ ಚರ್ಚೆ ನಡೆಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ ಹೇಳಿದರು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.

Advertisement

ಕನ್ನಡ ನಾಡಿನಲ್ಲಿದ್ದೂ, ನೆಲೆದ ಭಾಷೆಯ ಬೋಧನೆಗೆ ವಿರೋಧಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತಂತೆ ನಾಡಿನ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರನ್ನು ಒಳಗೊಂಡ ಸಾರ್ವಜನಿಕ ಚರ್ಚಾ ಕಾರ್ಯಕ್ರಮವನ್ನು ಮುಂದಿನ ಮೂರು ದಿನದೊಳಗೆ ನಡೆಸಿ, ಜನ ಜಾಗೃತಿ ಮೂಡಿಸಲಿದ್ದೇವೆ ಎಂದು ಹೇಳಿದರು. 

ರಾಜ್ಯದ ಎಲ್ಲ ಶಾಲೆಗಳಲ್ಲೂ ಒಂದರಿಂದ 10ನೇ ತರಗತಿವರೆಗೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಬೇಕು ಎಂದು ಸರ್ಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ.

ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ಕೇಂದ್ರೀಯ ವಿದ್ಯಾಲಯಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಈ ಸಂಬಂಧ ಇತ್ತೀಚೆಗೆ ಪ್ರಾಂಶುಪಾಲರೊಬ್ಬರು ಪತ್ರ ಬರೆದಿದ್ದಾರೆ ಎಂದು ವಿವರಿಸಿದರು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ. ಎಂ.ಕೆ. ರಮೇಶ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next