Advertisement

ಸೇಡಂನ ಅಡಕಿಯಲ್ಲಿ ಸಚಿವ ಆರ್‌.ಅಶೋಕ್‌ ಗ್ರಾಮ ವಾಸ್ತವ್ಯ

08:24 PM Aug 19, 2022 | Team Udayavani |

ಬೆಂಗಳೂರು: ಜನರ ಮನೆಬಾಗಿಲಿಗೆ ಸರ್ಕಾರ ಘೋಷಣೆಯೊಂದಿಗೆ ಕಂದಾಯ ಸಚಿವ ಆರ್‌.ಅಶೋಕ್‌ ಆರಂಭಿಸಿದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಈ ಬಾರಿ ಕಲಬುರಗಿ ಜಿಲ್ಲೆ ಅಡಕಿ ಗ್ರಾಮದಲ್ಲಿ ನಡೆಯಲಿದೆ.

Advertisement

ಜನರ ಬಳಿ ಸರ್ಕಾರವೇ ಬಂದು ಕುಂದು ಕೊರತೆಗಳನ್ನು ಆಲಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಶನಿವಾರ ಮತ್ತು ಭಾನುವಾರ ಕಲಬುರಗಿ ಜಿಲ್ಲೆಯ ಅಡಕಿ ಗ್ರಾಮದಲ್ಲಿ ಆಯೋಜಿಸಲಾಗಿದೆ.

ಕಂದಾಯ ಸಚಿವ ಆರ್‌.ಅಶೋಕ್‌ ಅವರು ಜನಸ್ಪಂದನ, ಕುಂದು ಕೊರತೆಗಳ ಪರಿಶೀಲನೆ ಹಾಗೂ ಸ್ಥಳೀಯರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಭಾನುವಾರ ಮೊರಾರ್ಜಿ ಶಾಲೆಯ ಆವರಣದಲ್ಲಿ ವಿವಿಧ ಇಲಾಖೆಯ ಮಳಿಗೆ ಉದ್ಘಾಟನೆ ಮಾಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಯ ವತಿಯಿಂದ ವಿವಿಧ ಸೌಲಭ್ಯಗಳ ವಿತರಣೆ ಮಾಡಲಿದ್ದಾರೆ. ವಿಶೇಷವಾಗಿ 10 ಸಾವಿರ ರೈತರಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ವಿತರಣೆ ಆಗಲಿದೆ. ಕಾರ್ಮಿಕ ಕಾರ್ಡ್‌, ಆರೋಗ್ಯ ಕಾರ್ಡ್‌, ಕೃಷಿ ಉಪಕರಣ ವಿತರಣೆ ಸೇರಿದಂತೆ ಸುಮಾರು 20 ಸಾವಿರ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ ಆಗಲಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next