Advertisement

ಅಜ್ಜರಕಾಡು ಮೈದಾನದಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ; ಸಾರ್ವಜನಿಕರಿಂದ ಅಂತಿಮ ದರ್ಶನ

09:55 AM Dec 30, 2019 | Nagendra Trasi |

ಉಡುಪಿ: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯ (88ವರ್ಷ) ಪಾರ್ಥಿವ ಶರೀರಕ್ಕೆ ಅಜ್ಜರಕಾಡು ಮೈದಾನದಲ್ಲಿ ರಾಷ್ಟ್ರಗೀತೆ ನುಡಿಸಿ, ಕುಶಾಲತೋಪು ಹಾರಿಸಿ ಸಕಲ ಸರ್ಕಾರಿ ಗೌರವವನ್ನು ಅರ್ಪಿಸಲಾಯಿತು.

Advertisement

ಉಡುಪಿ ಶ್ರೀಕೃಷ್ಣ ಮಠದಿಂದ ತೆರೆದ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಅಜ್ಜರಕಾಡು ಮೈದಾನಕ್ಕೆ ತರಲಾಯಿತು. ನಂತರ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ನೀಡಲಾಯಿತು. ನಂತರ ಸಾರ್ವಜನಿಕರಿಗೆ ಪೇಜಾವರಶ್ರೀಗಳ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶ್ರೀಗಳ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತ್ರಿವರ್ಣ ಧ್ವಜ ಹೊದಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಸಕ ರಘಪತಿ ಭಟ್, ಸಚಿವ ಬಸವರಾಜ್ ಬೊಮ್ಮಾಯಿ ,ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕ ಕೃಷ್ಣ ಪಾಲೇಮಾರ್ ಸೇರಿದಂತೆ ಹಲವು ಗಣ್ಯರು ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next