Advertisement

ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಿ

12:16 PM Jan 25, 2022 | Team Udayavani |

ಚಿಕ್ಕಬಳ್ಳಾಪುರ: ಕುಟುಂಬಗಳಲ್ಲಿರುವ ತಾರತಮ್ಯದಿಂದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣದ ಜೊತೆಗೆ ಕೆಲವು ರಂಗಗಳಲ್ಲಿನ ಸಾಧನೆಯಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಅವರ ಶ್ರೇಯೋಭಿವೃದ್ಧಿಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ನಗರದ ಜಿಪಂನ ಸರ್‌ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕಾರ್ಯವಿಧಾನ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಹಾಗೂ ಕೌಟುಂಬಿಕ ಜವಾಬ್ದಾರಿನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದು,ಪೋಷಕರು ಅವರಲ್ಲಿರುವ ಪ್ರತಿಭೆ ಗುರುತಿಸಿಪ್ರೋತ್ಸಾಹಿಸಬೇಕು. ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಎಂಬ ವಿಚಾರವೇ ಅತಿಶಯೋಕ್ತಿ ಆಗಿದ್ದು, ಕಾನೂನಿನ ಚೌಕಟ್ಟಿನಿಂದಅವರನ್ನು ರಕ್ಷಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ವಿವರಿಸಿದರು.

ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲರಾಗಲು ಯಾರೊಬ್ಬರಮೇಲೂ ಅವಲಂಬಿತರಾಗದೇ, ಸ್ವಾತಂತ್ರ್ಯವಾಗಿ, ಸ್ವಇಚ್ಛೆಯಿಂದ ಜೀವಿಸಬೇಕಾಗಿದೆ. ಜೊತೆಗೆಪೋಷಕರು ಹೆಣ್ಣು ಮಕ್ಕಳನ್ನು ಕೆಲವು ಕಟ್ಟುಪಾಡು,ನಿಬಂಧನೆಗಳನ್ನು ವಿಧಿ ಸದೇ ಕ್ಷೇತ್ರದಲ್ಲೂಸಬಲೀಕರಣರಾಗಲು ಆತ್ಮಸ್ಥೈರ್ಯ ತುಂಬಿಅವರನ್ನು ಪ್ರೋತ್ಸಾಹಿಸುವ ಮನೋಭಾವಬೆಳೆಸಿಕೊಳ್ಳಬೇಕು. ಆಗ ಮಹಿಳೆ ಹಾಗೂ ಮಕ್ಕಳುಸಮಾಜದಲ್ಲಿ ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಹಿರಿಯಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್‌ ಜೆ. ಮಿಸ್ಕಿನ್‌ ಮಾತನಾಡಿ, ಮಹಿಳೆಯರ ದೌರ್ಜನ್ಯಹಾಗೂ ಹೆಣ್ಣು ಮಕ್ಕಳ ಅಪಹರಣ ತಡೆಗಟ್ಟಲುಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಬೇಕು.ಮಕ್ಕಳು ಆಮಿಷಗಳಿಗೆ ಬಲಿಯಾಗದಂತೆ ಅವರಪೋಷಕರು ನಿಗಾವಹಿಸಬೇಕು. ಅಲ್ಲದೆ, ಎಲ್ಲಾಮಕ್ಕಳು ಸಹ ಶಿಕ್ಷಣ ಕಡ್ಡಾಯವಾಗಿಪಡೆದುಕೊಳ್ಳಬೇಕು. ಆಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

Advertisement

ಪೋಷಕರು ಪ್ರೋತ್ಸಾಹಿಸಲಿ: ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರವು ಸಾಕಷ್ಟು ಯೋಜನೆ ರೂಪಿಸಿದೆ.ಮೀಸಲಾತಿ ಕಲ್ಪಿಸಿದೆ. ಖಾಸಗಿ ಕ್ಷೇತ್ರದಲ್ಲಿಯೂಅವಕಾಶ ಒದಗಿಸಲಾಗುತ್ತಿದೆ. ಪೋಷಕರು ಹೆಣ್ಣು ಮಕ್ಕಳನ್ನು ಹೆಚ್ಚು ಪ್ರೋತ್ಸಾಹಿಸಬೇಕು ಎಂದು ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಇಂದಿರಾ ಆರ್‌.ಕಬಾಡೆ, ಜಿಪಂ ಮುಖ್ಯ ಯೋಜನಾಧಿಕಾರಿ ಎಂ.ಧನುರೇಣುಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉಪನಿರ್ದೇಶಕಿ ಅಶ್ವತ್ಥಮ್ಮ, ಜಿಲ್ಲಾ ಮಹಿಳಾ ಮತ್ತುಮಕ್ಕಳ ಸಮಿತಿ ಅಧ್ಯಕ್ಷ ರಾಮರಾಜು, ವಕೀಲ ಪ್ರಕಾಶ್‌, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next