ಲಕ್ನೋ: ಅಲಹಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೊರ್ವ ಬುಧವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ತನ್ನ ಕೈಯಲ್ಲಿ ಸ್ಫೋಟಗೊಂಡು ಗಂಭೀರ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಲಹಾಬಾದ್ ವಿಶ್ವವಿದ್ಯಾನಿಲಯದ ಎಂಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಗಂಭೀರ ಗಾಯಗೊಂಡ ವಿದ್ಯಾರ್ಥಿಯಾಗಿದ್ದು. ಈ ಕುರಿತು ಮಾಹಿತಿ ನೀಡಿದ ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ‘ಈತ ಪಿಸಿ ಬ್ಯಾನರ್ಜಿ ಹಾಸ್ಟೆಲ್‌ನಲ್ಲಿರುವ ತಮ್ಮ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡು ಅವರ ಬಲಗೈಗೆ ತೀವ್ರವಾಗಿ ಗಾಯವಾಗಿದೆ ಎಂದು ಹೇಳಿದ್ದಾರೆ.
ಆದರೆ ಈತ ಯಾವ ಉದ್ದೇಶಕ್ಕಾಗಿ ಬಾಂಬ್ ತಯಾರಿಸುತ್ತಿದ್ದ ಎಂಬ ವಿಚಾರ ಅನುಮಾನಕ್ಕೆ ಎಡೆ ಮಾಡಿದ್ದು ತನಿಖೆಯ ಬಳಿಕ ಹೆಚ್ಚಿನ ವಿವರ ಗೊತ್ತಾಗಲಿದೆ ಎನ್ನಲಾಗಿದೆ.
ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: Parliament;ಸಂಸತ್ ಭದ್ರತಾ ಲೋಪ ಕೇಸ್:ಆರೋಪಿಗಳ ವಿರುದ್ಧ ಭಯೋತ್ಪಾದಕ ನಿಗ್ರಹ ಕಾಯ್ದೆ ದಾಖಲು