Advertisement

ಧೋನಿ ವಿರುದ್ಧ ಆರೋಪ: ನಿವೃತ್ತ ಐಪಿಎಸ್‌ ಅಧಿಕಾರಿಗೆ 15 ದಿನ ಜೈಲು

12:26 AM Dec 17, 2023 | Team Udayavani |

ಚೆನ್ನೈ: 2013ರಲ್ಲಿ ಐಪಿಎಲ್‌ ಬೆಟ್ಟಿಂಗ್‌ ಹಾಗೂ ಮ್ಯಾಚ್‌ ಫಿಕ್ಸಿಂಗ್‌ ಸಂಬಂಧ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮಿಳುನಾಡಿನ ನಿವೃತ್ತ ಐಪಿಎಸ್‌ ಅಧಿಕಾರಿ ಜಿ.ಸಂಪತ್‌ಕುಮಾರ್‌ಗೆ ಮದ್ರಾಸ್‌ ಹೈಕೋರ್ಟ್‌ 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Advertisement

ನ್ಯಾ| ಸುಂದರ್‌ ಹಾಗೂ ಮೋಹನ್‌ ಅವರಿದ್ದ ಪೀಠವು ಈ ಆದೇಶ ನೀಡಿದೆ. ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರಿಗೆ ಅವಕಾಶ ನೀಡಲು ಶಿಕ್ಷೆ ವಿಧಿಸುವುದನ್ನು 30 ದಿನಗಳವರೆಗೆ ತಡೆ ಹಿಡಿದಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಧಿಕಾರಿ ವಿರುದ್ಧ ಧೋನಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. 2013ರಲ್ಲಿ ಐಪಿಎಲ್‌ ಬೆಟ್ಟಿಂಗ್‌ ದಂಧೆಯಲ್ಲಿ ತಮ್ಮನ್ನು ಹೆಸರಿಸಿದ್ದಕ್ಕಾಗಿ 100 ಕೋಟಿ ರೂ. ನಷ್ಟ ಪರಿಹಾರ ಕೋರಿ ಧೋನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅಫಿದವಿತ್‌ನಲ್ಲಿ ಸಂಪತ್‌ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next