Advertisement

ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧದ ಎರಡನೇ FIR ಗೂ ತಡೆ

11:11 PM Aug 17, 2023 | Team Udayavani |

ಬೆಂಗಳೂರು: ಪರಿಶಿಷ್ಟ ಜನಾಂಗಕ್ಕೆ ಅವಮಾನವಾಗುವಂಥ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್‌ ಠಾಣೆಯಲ್ಲಿ ದಾಖ ಲಾದ 2ನೇ ಎಫ್ಐಆರ್‌ಗೆ ಹೈಕೋರ್ಟ್‌ ಗುರುವಾರ ಮಧ್ಯಾಂತರ ತಡೆ ನೀಡಿದೆ.

Advertisement

ಕರ್ನಾಟಕ ರಣಧೀರ ಪಡೆ ಸಂಘಟನೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್‌ ಕುಮಾರ್‌ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್‌ ಠಾಣೆ ಪೊಲೀಸರು ದಾಖಲಿಸಿದ ಎಫ್ಐಆರ್‌ ರದ್ದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತಡೆ ನೀಡಿ ಆದೇಶಿಸಿತು. ಇದೇ ಆರೋಪ ಸಂಬಂಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ಗೆ ಆ.14ರಂದು ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿತ್ತು. ಉಪೇಂದ್ರ ಪರ ಹಿರಿಯ ವಕೀಲ ಉದಯ್‌ ಹೊಳ್ಳ ಹಾಜರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next