Advertisement

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

01:24 AM Jan 10, 2025 | Team Udayavani |

ಹೊಸದಿಲ್ಲಿ: ಹೊಸದಿಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್‌ ವರ್ಮಾ ಅವರನ್ನು ಚುನಾವಣೆ ಸ್ಪರ್ಧೆಯಿಂದ ನಿರ್ಬಂಧಿಸುವಂತೆ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದಾರೆ. ಅದೇ ಕ್ಷೇತ್ರದಿಂದ ಕೇಜ್ರಿವಾಲ್‌ ಕೂಡ ಕಣಕ್ಕಿಳಿಯಲಿದ್ದಾರೆ. ಗುರುವಾರ ಆಯೋಗದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ ಕೇಜ್ರಿವಾಲ್‌ ಮತ್ತು ಸಿಎಂ ಆತಿಶಿ ಮಲೇìನಾ “ವರ್ಮಾ ಅವರು, ಉದ್ಯೋಗ ಶಿಬಿರಗಳನ್ನು ಆಯೋಜಿಸಿ, ಬಹಿರಂಗವಾಗಿಯೇ ಹಣ ಹಂಚುತ್ತಿದ್ದಾರೆ. ಅವರನ್ನು ಸ್ಪರ್ಧೆಯಿಂದ ನಿರ್ಬಂಧಿಸಬೇಕು. ಬಿಜೆಪಿ ಅಭ್ಯರ್ಥಿ ಮನೆ ಮೇಲೆ ದಾಳಿ ಮಾಡಬೇಕು. ಡಿ.15ರಿಂದ ಜ.7ರ ವರೆಗೆ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 5,500 ಅರ್ಜಿಗಳು ಬಂದಿವೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next