ಬೆಂಗಳೂರು: ಚುನಾವಣಾ ಅಕ್ರಮ ಎಸಗಿದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:crypto ಕರೆನ್ಸಿ ಅಕ್ರಮ ವಹಿವಾಟು; 20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ; ಕೇಂದ್ರ ಸರ್ಕಾರ
ಚುನಾವಣಾ ಅಕ್ರಮ ಆರೋಪದಲ್ಲಿ ಶಾಸಕ ಸ್ಥಾನ ಕಳೆದು ಕೊಂಡಿರುವ ಗೌರಿ ಶಂಕರ್ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲು ಗೌರಿಶಂಕರ್ ಪರ ವಕೀಲರು ಮನವಿ ಮಾಡಿರುವುದರಿಂದ 30 ದಿನಗಳ ಮಟ್ಟಿಗೆ ತನ್ನದೇ ಆದೇಶಕ್ಕೆ ಹೈಕೋರ್ಟ್ ತಡೆ ಸಹ ನೀಡಿದೆ. ಹಾಗಾಗಿ ಸದ್ಯದ ಮಟ್ಟಿಗೆ ಗೌರಿ ಶಂಕರ್ ಬಚಾವ್ ಆಗಿದ್ದಾರೆ. ಒಂದೊಮ್ಮೆ ಸುಪ್ರೀಂಕೋರ್ಟ್ ನಲ್ಲಿ ತಡೆ ಸಿಗದಿದ್ದರೆ ಸಂಕಷ್ಟ ತಪ್ಪಿದ್ದಲ್ಲ.
ಜೊತೆಗೆ ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಅನಿಶ್ಚಿತತೆ ಎದುರಾಗಲಿದೆ.