Advertisement

ಅಲ್ವಸಂಖ್ಯಾತರ ಕೇಸ್‌ ವಾಪಸ್‌: ಸರ್ಕಾರ ಪತ್ರ

06:00 AM Jan 27, 2018 | |

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಕೋಮುಗಲಭೆ ಹಾಗೂ ಇತರ ಪ್ರಕರಣಗಳ ಸಂದರ್ಭದಲ್ಲಿ ಮುಗ್ಧ ಅಲ್ವಸಂಖ್ಯಾತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ನಿಂದ ಹಿಂದಕ್ಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ವಿಳಂಬ ಮಾಡದೇ ಸಲ್ಲಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಾರ್ಯಾಲಯದಿಂದ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

Advertisement

ಡಿಐಜಿ ಪರವಾಗಿ ಹಿರಿಯ ಪೊಲಿಸ್‌ ಅಧಿಕಾರಿಯಾಗಿರುವ ಎಐಜಿಪಿ ಶಿವಪ್ರಕಾಶ್‌ ದೇವರಾಜ್‌ ಅವರು ಮಂಗಳೂರು, ಬೆಳಗಾವಿ ಪೊಲೀಸ್‌ ಆಯುಕ್ತರು ಸೇರಿದಂತೆ 21 ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಹಲವೆಡೆ ಕೋಮು ಗಲಭೆ ಸಂಭವಿಸಿದ ಪ್ರಕರಣಗಳಲ್ಲಿ ಅಮಾಯಕ ಅಲ್ಪಸಂಖ್ಯಾತರ ಮೇಲಿನ ಮೊಕದ್ದಮೆಗಳನ್ನು ವಾಪಸ್‌ ಪಡೆಯುವ ಕುರಿತು ತಮ್ಮ ನಿಲುವು ತಿಳಿಸಬೇಕು. ಈ ಹಿಂದೆ ಪತ್ರ ಬರೆದಾಗಲೂ ಯಾವುದೇ ಅಭಿಪ್ರಾಯ ತಿಳಿಸದೇ ಇರುವುದನ್ನು ಪತ್ರದಲ್ಲಿ ಪ್ರಸ್ಥಾಪಿಸಲಾಗಿದ್ದು, ಈ ಬಾರಿಯ ಪತ್ರಕ್ಕೆ ತಕ್ಷಣ ಸ್ಪಂದಿಸಿ, ತಪ್ಪದೇ ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದೆ.

ಮಂಗಳೂರು, ಬೆಳಗಾವಿ ಪೊಲೀಸ್‌ ಆಯುಕ್ತರಲ್ಲದೇ ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಕೆಜಿಎಫ್, ಮೈಸೂರು, ಹಾಸನ, ಕೊಡಗು, ಚಾಮರಾಜನಗರ,  ವಿಜಯಪುರ, ಧಾರವಾಡ, ಗದಗ, ಹಾವೇರಿ, ಕಾರವಾರ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಬೆಳಗಾವಿ, ಬಳ್ಳಾರಿ, ಕಲಬುರಗಿ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಯ ಎಸ್ಪಿಗಳಿಗೆ  “ನೆನಪೋಲೆ-2 ಅತ್ಯಂತ ಜರೂರು ‘ ಎಂದು ಜ.25ರಂದು ಬರೆಯಲಾದ ಪತ್ರದಲ್ಲಿ ತಿಳಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ 2013 ರಿಂದ 2017 ರವರೆಗಿನ ಅವಧಿಯಲ್ಲಿ ನಡೆದ ಕೋಮುಗಲಭೆ ಮತ್ತು ಇತರ ಪ್ರಕರಣಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಮುಗ್ಧ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯುವ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಈ ಮೊದಲು ಸಹ ಪತ್ರ ಬರೆದಾಗ ಇದುವರೆಗೂ ತಮ್ಮಿಂದ ಯಾವುದೇ ವರದಿ ಬಂದಿಲ್ಲ. ಹೀಗಾಗಿ ಕೂಡಲೇ ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಹಿಂಪಡೆಯುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ವರದಿ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next