Advertisement

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

03:20 PM Nov 26, 2020 | Suhan S |

ಶ್ರೀನಿವಾಸಪುರ: ಕಂದಾಯ ಇಲಾಖೆಯಲ್ಲಿ ಜನಸಾಮಾನ್ಯರ ಕೆಲಸಗಳು ದಲ್ಲಾಳಿಗಳಿಲ್ಲದೇ ಆಗುತ್ತಿಲ್ಲ. ಕೋವಿಡ್‌ ನೆಪದೊಂದಿಗೆ ಕಚೇರಿಗೆ ಬರುವವರನ್ನು ಅಲೆದಾಡಿಸುವುದು, ಭೂ ಹಗರಣಗಳಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಸರ್ಕಾರವನ್ನು ಆಗ್ರಹಿಸಿದರು.

Advertisement

ಶ್ರೀನಿವಾಸಪುರ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವವಹಿಸಿಮಾತನಾಡಿ, ಪ್ರಸ್ತುತ ಕಂದಾಯ ಇಲಾಖೆಯಲ್ಲಿ ಕೋವಿಡ್‌ ನೆಪದಲ್ಲಿ ಬಡವರನ್ನು ನಿರ್ಲಕ್ಷ್ಯ ಮಾಡಿ ಶ್ರೀಮಂತರ ಮನೆ ಬಾಗಿಲಿಗೆ ದಾಖಲೆಗಳನ್ನು ನೀಡುವ ಮಟ್ಟಕ್ಕೆ ಕಂದಾಯ ಸರ್ವೆ ಇಲಾಖೆಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುರಿಗಾಹಿಗಳಿಗೆ ಕಿ.ಮೀ ಗ ಟ್ಟಲೇ ಹೋದರೂ ಮೇಯಿಸಲು ಗೋಮಾಳ ‌ ಜಮೀನು ಇಲ್ಲ. ಬಡವರ ಹೆಸರಿನ‌ಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ಮಂಜೂರು ಮಾಡುತ್ತಿದ್ದಾರೆ. ಸದರಿ ಪ್ರಕರಣವನ್ನು ಕಂದಾಯ ಮಂತ್ರಿಗಳಾಗಿ ‌ ಅಶೋಕ್‌ ರವರು ಶ್ರೀನಿವಾಸಪುರ ‌ ಭೂ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ, ತಾಲೂಕು ಅಧ್ಯಕ್ಷ ತೆರ್ನಹಳ್ಳಿ ಆಂಜಪ್ಪ, ಲೋಕೇಶ್‌, ಶಿವ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next