Advertisement

ಆಲೆಖಾನ್‌ ಗುಡ್ಡ ಕುಸಿತ: ಸಂಚಾರ ಸ್ಥಗಿತ

11:31 PM Aug 05, 2019 | Team Udayavani |

ಚಿಕ್ಕಮಗಳೂರು: ಜಿಲ್ಲಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ಚಾರ್ಮಾಡಿ ಘಾಟಿ ರಸ್ತೆಯ ಆಲೆಖಾನ್‌ ಬಳಿ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

Advertisement

ಗೋಣಿಬೀಡು ಸೇರಿ ವಿವಿಧೆಡೆ ಮಳೆಯೊಂದಿಗೆ ಗಾಳಿಯೂ ಬೀಸಿದ್ದರಿಂದ ವಿದ್ಯುತ್‌ ಕಂಬಗಳು ಧರೆಗುರುಳಿ, ಕೆಲವೆಡೆ ವಿದ್ಯುತ್‌ ಕೈಕೊಟ್ಟಿದೆ. ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲಿ ಭಾನುವಾರ ರಾತ್ರಿಯಿಂದಲೂ ಸತತ ಮಳೆಯಾಗುತ್ತಿದೆ. ಜಿಲ್ಲೆಯ ಜೀವನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯುಂಟಾಗಿದೆ.

ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿರುವುದರಿಂದ ಗೋಣಿಬೀಡು, ಜನ್ನಾಪುರ, ಕಿರಗುಂದ, ಕಣಚೂರು ಗ್ರಾಮಗಳ ಬಳಿ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಶಾಲಾ-ಕಾಲೇಜಿಗೆ ರಜೆ: ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದ ತಹಶೀಲ್ದಾರ್‌ ರಮೇಶ್‌, ಮಂಗಳವಾರವೂ ರಜೆ ವಿಸ್ತರಣೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಗಿರಿ ಶ್ರೇಣಿಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 30 ಮಿ.ಮೀ. ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next