Advertisement

ಲೋಕಸಭಾ ಚುನಾವಣೆಗೆ ಮೈತ್ರಿ ಖಚಿತ :ಎಚ್‌.ಡಿ. ರೇವಣ್ಣ 

12:20 AM Feb 20, 2019 | |

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸ್ಥಾನ ಹಂಚಿಕೆ ವಿಚಾರವಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಸ್ಪಷ್ಟಪಡಿಸಿದರು. 

Advertisement

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುವುದು ಖಚಿತ.ಯಾವ ಪಕ್ಷಕ್ಕೆ ಎಷ್ಟು, ಯಾವ ಕ್ಷೇತ್ರಗಳು ಎಂಬ ಕುರಿತಂತೆ ಎರಡೂ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದರು. ಮಾಜಿ ಸಚಿವ ಎ.ಮಂಜು ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next