Advertisement

ಮೈತ್ರಿ ಹೋರಾಟ ಲೋಕಸಭಾ ಚುನಾವಣೆಗೆ ವೇದಿಕೆ: ಸಿಎಂ

06:00 AM Nov 03, 2018 | Team Udayavani |

ಹಾಸನ: ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಚುನಾವಣೆಯನ್ನೇ ರದ್ದುಗೊಳಿಸಬೇಕೆಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದು, ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳುವುದು ಬಾಲಿಶತನದ ನಡವಳಿಕೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರ ಕ್ಷೇತ್ರದಲ್ಲಿ ನಾನು
ನಾಲ್ಕು ಬಾರಿ ಚುನಾವಣೆ ಎದುರಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸದಿದ್ದರೂ ಅಲ್ಲಿನ ಮತದಾರರು ನನ್ನನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಅಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವೇ ಇಲ್ಲ ಎಂಬುದು ಬಿಜೆಪಿಯವರಿಗೂ ಗೊತ್ತಿತ್ತು. ಆದರೂ, ಕಾಂಗ್ರೆಸ್‌ನ ಮುಖಂಡನನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆಗೆ ಇಳಿಸಿದರು. ಗೆಲ್ಲಲು ಸಾಧ್ಯವಿಲ್ಲ ಎಂದು ಚುನಾವಣಾ ಕಣದಿಂದ ವಾಪಸ್ಸಾಗಿ ದ್ದಾರೆ. ಆ ಬೆಳವಣಿಗೆಗೂ, ಜೆಡಿಎಸ್‌ಗೂ ಸಂಬಂಧವಿಲ್ಲ ಎಂದು ಸ್ಪಷ್ಟಡಿಸಿದರು. ಮೂರು ಲೋಕಸಭೆ, ಎರಡು
ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ. ಈ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್‌ – ಜೆಡಿಎಸ್‌ ಮುಖಂಡರು ಜಂಟಿ ಪ್ರಚಾರ ನಡೆಸಿರುವ ಬೆಳವಣಿಗೆಯು ಮುಂಬರುವ ಲೋಕಸಭಾ ಚುನಾವಣೆಯ ಮೈತ್ರಿಗೆ ವೇದಿಕೆಯಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next