Advertisement

ಮೈತ್ರಿಕೂಟ: 22ಕ್ಕೆ ದಿಲ್ಲಿಯಲ್ಲಿ ಸಭೆ

06:00 AM Nov 11, 2018 | |

ಅಮರಾವತಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧಗೊಳ್ಳುತ್ತಿರುವ ಪ್ರತಿಪಕ್ಷಗಳ ಒಕ್ಕೂಟ ಮುಂದಿನ ರಣತಂತ್ರ ಸಿದ್ಧಪಡಿಸಲು ನ.22ರಂದು ನಾಯಕರ ಸಭೆ ನವದೆಹಲಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಸರ್ಕಾರವನ್ನು ಎದುರಿಸುವ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗುತ್ತದೆ. ಅದಕ್ಕೆ ಪೂರಕವಾಗಿ ಶನಿವಾರ ಅಮರಾವತಿಯಲ್ಲಿ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹೊಟ್‌ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಭೇಟಿಯಾಗಿ ಮಾತುಕತೆ ನಡೆಸಿದರು. 

Advertisement

ಗೆಹೊಟ್‌ರನ್ನು ಭೇಟಿಯಾದ ಬಳಿಕ ಮಾತನಾಡಿದ ನಾಯ್ಡು ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದೇ ವೇದಿಕೆಯಲ್ಲಿ ತರಲು ಪ್ರಯತ್ನಗಳು ನಡೆದಿವೆ. ನ.19 ಅಥವಾ 20ರಂದು ಟಿಎಂಸಿ ನಾಯಕಿ  ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಪ್ರತಿಪಕ್ಷಗಳ ಒಕ್ಕೂಟಕ್ಕೆ ಆಹ್ವಾನಿಸುವುದಾಗಿ ತಿಳಿಸಿದ್ದಾರೆ ನಾಯ್ಡು.  ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರೆ, ಶುಕ್ರವಾರ ನಾಯ್ಡು ಚೆ°ನೈನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ರನ್ನು ಭೇಟಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next