Advertisement

Lok Sabha elections: ಮೈತ್ರಿ ಚುನಾವಣೆಗೆ ಸೀಮಿತವಲ್ಲ, ನಿರಂತರ ಇರಲಿದೆ: ಎಚ್‌.ಡಿ.ದೇವೇಗೌಡ

09:03 PM Apr 04, 2024 | Team Udayavani |

ಮಂಡ್ಯ/ಹಾಸನ: ಬಿಜೆಪಿ-ಜೆಡಿಎಸ್‌ ಮೈತ್ರಿ ಈ ಚುನಾವಣೆಗೆ ಮಾತ್ರ ಸೀಮಿತವಲ್ಲ. ಅದು ಮುಂದೆಯೂ ಮುಂದುವರಿಯಲಿದೆ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

Advertisement

ಹಾಸನದಲ್ಲಿ ಬೃಹತ್‌ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ಅನ್ನು ಮುಗಿಸುತ್ತೇವೆ ಎಂದು ಹೇಳುವವರನ್ನು ರಾಜಕೀಯವಾಗಿ ಮುಗಿಸುವವರೆಗೂ ಈ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದರು.

ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ  ಎಚ್‌.ಡಿ.ಕುಮಾರಸ್ವಾಮಿ, ಈ ಮೈತ್ರಿ ಹೀಗೆ ಮುಂದುವರಿಯಲಿದ್ದು, ಕಾಂಗ್ರೆಸ್‌ ಅನ್ನು ಪ್ರತಿ ಚುನಾವಣೆಯಲ್ಲೂ ಸೋಲಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next