Advertisement

ಬಿಜೆಪಿಗೆ ಮೈತ್ರಿ ಪಕ್ಷಗಳ ಕಾರ್ಯಕರ್ತರ ಬೆಂಬಲ

07:44 AM Mar 12, 2019 | |

ತಿ. ನರಸೀಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಹೊಂದಾಣಿಕೆಯಿಲ್ಲ. ಲೋಕಸಭಾ ಚುನಾವಣೆಯಲ್ಲಿ  ಮೈತ್ರಿ  ಪಕ್ಷಗಳ ಪೈಕಿ ಒಂದು ಪಕ್ಷದ ಕಾರ್ಯಕರ್ತರು ಬಿಜೆಪಿ ಪರವಾಗಿ ನಿಲ್ಲುವ ವಿಶ್ವಾಸದೆ ಎಂದು ಹಿರಿಯ ಮುಖಂಡ, ಮಾಜಿ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು. 

Advertisement

ಪಟ್ಟಣದ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ನಡೆದ‌ ಪ್ರಬುದ್ಧರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರದ ಮುಖಂಡರು ನಡೆದುಕೊಳ್ಳುತ್ತಿರುವ ರೀತಿಯನ್ನು ಗಮನಿಸುತ್ತಿದ್ದಾರೆ. ಸಚಿವರೇ ಹೆಣ್ಣು  ಮಗಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡುತ್ತಿದ್ದಾರೆ.

ಅವರ ಇಂತಹ ಅಸಂಬದ್ಧ ರಾಜಕೀಯ ನಡವಳಿಕೆಯ ಜನರು ಬೇಸತ್ತಿದ್ದು, ಅದನ್ನು ಸೂಕ್ಷ್ಮವಾಗಿ ಬಳಸಿಕೊಂಡು ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮುಂದಿಟ್ಟು ಜನರ ಮುಂದೆ ಹೋಗುವಂತೆ ಕಾರ್ಯಕರ್ತರಿಗೆ ತಿಳಿಸಿದ್ದೇವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ದೋಷಾರೋಪ ಮಾಡದೇ ಸಕಾರತ್ಮಕ ಪ್ರಚಾರದ ಮೂಲಕ ಹೆಚ್ಚು ಸ್ಥಾನ ಪಡೆಯುತ್ತದೆ. ರಾಜ್ಯದಲ್ಲಿ ಯಾರ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಗೊಂದಲವಿದೆ. ಮಹಾಘಟ ಬಂಧನ್‌ ಹೊಂದಾಣಿಕೆ ಯಾವುದೂ ಇಲ್ಲಿ ನಡೆಯುವುದಿಲ್ಲ.

ನಾವು ಬೂತ್‌ ಹಂತದಿಂದಲೇ ಪಕ್ಷ ಸಂಘಟಿಸಿದ್ದೇವೆ. ದೇಶವನ್ನು ಅಭಿವೃದ್ಧಿ ಹಾಗೂ ರಕ್ಷಣೆಯ ದೃಷ್ಟಿಯಿಂದ  ಈ ಚುನಾವಣೆ ನಮಗೆ ಮಹತ್ವವಾಗಿದೆ ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿ ನಾಯಕತ್ವ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನಾಯಕತ್ವದಲ್ಲಿ ಈ ಚುನಾವಣೆ ಎದುರಿಸಲಿದ್ದೇವೆ.

Advertisement

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುವ ಸೂಕ್ತ ಹಾಗೂ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ಇವರನ್ನು ಆಯ್ಕೆ ಮಾಡಿದರೆ ನಾವು ಕೆಲಸ ಮಾಡುತ್ತೇವೆ ಎನ್ನುವ ಅಭಿಪ್ರಾಯ ಪಡೆದು ಅಭ್ಯರ್ಥಿ ಘೋಷಣೆಯಾಗಲಿದೆ ಎಂದರು. 

ಸಭೆಯಲ್ಲಿ ಮಾಜಿ ಶಾಸಕ ಡಾ. ಎನ್‌. ಎಲ್‌ ಭಾರತೀಶಂಕರ್‌, ಕ್ಷೇತ್ರಾಧ್ಯಕ್ಷ ಹಿರಿಯೂರು ಪರಶಿವಮೂರ್ತಿ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ,  ಜಿಪಂ ಮಾಜಿ ಸದಸ್ಯ ಕೆ.ಸಿ. ಲೋಕೇಶ್‌, ರಾಜ್ಯ ಸಮಿತಿ ಸದಸ್ಯ ಕರುಹಟ್ಟಿ ಮಹದೇವಯ್ಯ,  ಪುರಸಭಾ ಸದಸ್ಯ ಕಿರಣ್‌, ಎಂ.ದಾಸಯ್ಯ, ಕೆಬ್ಬೆಹುಂಡಿ ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next