Advertisement

BJP ಯೊಂದಿಗೆ ಮೈತ್ರಿ ಮುಂದುವರಿಕೆ, ಅಣ್ಣಾಮಲೈ ಅವರೊಂದಿಗೆ…: ಪಳನಿಸ್ವಾಮಿ

03:04 PM Apr 27, 2023 | Team Udayavani |

ಚೆನ್ನೈ : ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಮುಂದುವರೆಯುತ್ತದೆ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಗುರುವಾರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ಹೇಳಿಕೆ ನೀಡಿದ್ದಾರೆ.

Advertisement

2019 ರ ಲೋಕಸಭಾ ಚುನಾವಣೆ ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಮಿತ್ರಪಕ್ಷಗಳಾಗಿ ಹೋರಾಡಿದ ಎರಡು ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳ ವರದಿಯ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದ ಒಂದು ದಿನದ ನಂತರ ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಇಪಿಎಸ್ “ನಾವು 2019 ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇವು,ಅದು 2021ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು ಈ ವರ್ಷದ ಆರಂಭದಲ್ಲಿ ಈರೋಡ್ ಉಪಚುನಾವಣೆಯಲ್ಲೂ ಮುಂದುವರೆಯಿತು.ಮೈತ್ರಿ ಮುಂದುವರಿಯುತ್ತದೆ” ಎಂದು ಅವರು ಪ್ರತಿಪಾದಿಸಿದರು.

ಬುಧವಾರ ರಾತ್ರಿ ಶಾ ಅವರೊಂದಿಗಿನ ಭೇಟಿಯಲ್ಲಿ ಅಣ್ಣಾಮಲೈ ಅವರೊಂದಿಗಿನ ವ್ಯತ್ಯಾಸಗಳ ವಿಚಾರಗಳು ಚರ್ಚೆಗೆ ಬಂದಿವೆಯೇ ಎಂದು ಕೇಳಿದಾಗ, ”ಈ ಪ್ರಶ್ನೆಯೇ ತಪ್ಪು”ಎಂದರು. ”ಅಣ್ಣಾಮಲೈ ಅವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಹಾಗಿದ್ದಲ್ಲಿ, ಅವರು ಇತ್ತೀಚಿನ ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದ್ದರೇ . ಮಾಧ್ಯಮಗಳು ಮಾತ್ರ ಬಿರುಕು ಮೂಡಿಸಲು ಇಂತಹ ಪ್ರಶ್ನೆಗಳನ್ನು ಕೇಳುತ್ತಿವೆ’ ಎಂದರು.

ಎಐಎಡಿಎಂಕೆ ಅಥವಾ ಬಿಜೆಪಿ ಆಗಿರಲಿ, ಪ್ರತಿಯೊಬ್ಬರೂ ತಮ್ಮ ಪಕ್ಷದ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ನೋಡುತ್ತಾರೆ. “ನಮ್ಮ ಮೈತ್ರಿಕೂಟದಲ್ಲಿರುವ ಪಕ್ಷಗಳು ಡಿಎಂಕೆ ನೇತೃತ್ವದ ಒಕ್ಕೂಟದ ಪಕ್ಷಗಳಿಗಿಂತ ಭಿನ್ನವಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಪ್ರತಿಯೊಬ್ಬರೂ ಅವರವರ ಸಿದ್ಧಾಂತವನ್ನು ಹೊಂದಿದ್ದು ಅದರಂತೆ ಕಾರ್ಯನಿರ್ವಹಿಸುತ್ತೇವೆ. ಮೈತ್ರಿಯಾಗಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಮತ್ತು ಎಐಎಡಿಎಂಕೆಯ ನೀತಿಯು ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸುತ್ತದೆ, ”ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next