ಕಲಬುರಗಿ: ಅರ್ಹ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗಿದೆಯೇ ಎಂಬುದನ್ನು ಮೂರನೇ ತಂಡದಿಂದ ಪರಿಶೀಲನೆ ನಡೆಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಸೇಡಂದಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೇ ಬಾರಿಗೆ ಗ್ರಾಮೀಣದಲ್ಲಿ ನಾಲ್ಕು ಲಕ್ಷ ಹಾಗೂ ನಗರದಲ್ಲಿ ಒಂದು ಲಕ್ಷ ಸೇರಿ ಒಟ್ಟಾರೆ ಐದು ಲಕ್ಷ ಮನೆಗಳನ್ನು ಹಂಚಲಾಗುತ್ತಿದೆ. ಎಲ್ಲ ಮನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಮನೆ ಇದ್ದವರೇ ಮನೆ ಪಡೆಯುವುದನ್ನು ತಪ್ಪಿಸಲು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಮೂರನೇ ತಂಡದಿಂದ ಪರಿಶೀಲನೆ ನಡೆಸಲಾಗುವುದು. ಲೋಪ ಕಂಡು ಬಂದಲ್ಲಿ ಸಂಬಂಧಿಸಿದವರ ವಿರುದ್ದ ಕ್ರಮ ಕೈಗೊಂಡು ಸರಿಪಡಿಸಲಾಗುವುದು ಎಂದು ಸಚಿವರು ವಿವರಣೆ ನೀಡಿದರು.
224 ವಿಧಾನಸಭಾ ಕ್ಷೇತ್ರಗಳಿಗೆ 6600 ಕೋ ರೂ ವೆಚ್ಚದಲ್ಲಿ ಮನೆಗಳಿಗೆ ಸಹಾಯ ಧನ ಕಲ್ಪಿಸಲಾಗುತ್ತಿದೆ. ಕೇಂದ್ರ ಸರ್ಕಾರದಿಂದಲೂ ಮನೆಗಳ ಹಂಚಿಕೆಯಾದಲ್ಲಿ ವಸತಿ ಕ್ಷೇತ್ರದಲ್ಲಿ ಕ್ರಾಂತಿಯಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಪಶ್ಚಿಮ ಬಂಗಾಲ : ಬೆಳಗ್ಗೆ ಗಂಟೆ 2ಕ್ಕೆ ವಿಧಾನಸಭೆ ಅಧಿವೇಶನ!
ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಐಎಸ್ಎಸ್ ಅಧಿಕಾರಿ ನೇಮಕ ಮಾಡಲಾಗಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ಪ್ರಧಾನಮಂತ್ರಿ ಗಳು ಸಹ ಎಲ್ಲಾ ರೀತಿಯ ವ್ಯವಸ್ಥೆ ಮಾಡ್ತಿದ್ದಾರೆ. ದಿಢೀರನೆ ಆಗಿರುವ ಬೆಳವಣಿಗೆಯಿಂದ ಆತಂಕವಿದೆ. ಕನ್ನಡಿಗರನ್ನು ಕರೆತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾಂಗ್ರೆಸ್ ನವರು ಕೈಗೊಳ್ಳುತ್ತಿರುವ ಮೇಕೆದಾಟು ಪಾದಯಾತ್ರೆಯಿಂದ ಅವರಿಗೆ ಒಳ್ಳೆಯದಾಗಲಿ ಎಂದರು.