Advertisement

ನೂತನ ಸಚಿವರಿಗೆ ನಾಳೆ ಬೆಳಿಗ್ಗೆ ಖಾತೆ ಹಂಚಿಕೆ: ಯಡಿಯೂರಪ್ಪ ಹೇಳಿಕೆ

10:03 AM Feb 10, 2020 | keerthan |

ಶಿವಮೊಗ್ಗ: ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಸೋಮವಾರ ಬೆಳಿಗ್ಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸದಲ್ಲಿ ಮಾತನಾಡಿದ ಅವರು, ನಿನ್ನೆ ಶನಿವಾರ, ಇಂದು ಭಾನುವಾರ ಆದ್ದರಿಂದ ಖಾತೆ ಹಂಚಿಕೆ ಮಾಡಿಲ್ಲ. ನಾಳೆ ಬೆಳಿಗ್ಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದರು.

ಉಮೇಶ್ ಕತ್ತಿ ಅವರಿಗೆ ಮೊದಲನೇ ಪಟ್ಟಿಯಲ್ಲೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಸಂಪುಟ ವಿಸ್ತರಣೆ ಬಳಿಕ ಕತ್ತಿ‌ ನಮ್ಮ‌ ನಿವಾಸಕ್ಕೆ ಭೇಟಿ ನೀಡಿದ್ದರು. ನಾನು ಅವರೊಂದಿಗೆ ಮಾತನಾಡಿದ್ದೇನೆ. ಮುಂದಿನ ದಿನದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದರು.

ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಸಚಿವ ಸ್ಥಾನದ ಅಪೇಕ್ಷಿತರಿದ್ದಾರೆ. ಅನಿರ್ವಾಯ ಸ್ಥಿತಿ ಇದೆ ಎಂದು ಎಲ್ಲರಿಗೂ ಮನವರಿಕೆ ಮಾಡಿದ್ದೇನೆ. ಆದರೆ ಮೂಲ ಬಿಜೆಪಿಗರಿಗೆ ಹಾಗೂ ವಲಸೆ ಬಿಜೆಪಿಗರ ನಡುವೆ ಸಚಿವ ಸ್ಥಾನದ ಬಗ್ಗೆ ಗೊಂದಲವಿಲ್ಲ ಎಂದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತಾರೆ ಎಂಬ ಹೊರಟ್ಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ, ಕುಮಾರಸ್ವಾಮಿ, ಹೊರಟ್ಟಿ ಅವರು ರಾಜಕೀಯ ಕಾರಣಕ್ಕಾಗಿ ಹೇಳಿಕೆ ಕೊಡುತ್ತಿರುತ್ತಾರೆ. ಅದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.

Advertisement

ಬಜೆಟ್ ನಂತರ ನಿಗಮ‌ ಮಂಡಳಿ ನೇಮಕ ಮಾಡಲಾಗುವುದು ಎಂದ ಅವರು, ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ಲೀ. ಗೆ 20 ಪೈಸೆ ಪ್ರೋತ್ಸಾಹ ಧನ ನೀಡುವ ಬಗ್ಗೆ  ಬಜೆಟ್ ನಲ್ಲಿ ತೀರ್ಮಾನಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next