Advertisement
ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಅ.31ರಿಂದ ನ.2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಯಾರು ಕೂಡ ಪಟಾಕಿ ಸಿಡಿಸುವಂತಿಲ್ಲ. ಪಟಾಕಿಗಳು ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು. ರಾತ್ರಿ 10ರ ನಂತರ ಪಟಾಕಿ ಸಿಡಿಸಿದರೆ ಪೊಲಿಸರು ಮತ್ತು ಪಾಲಿಕೆ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದರು.
Related Articles
Advertisement
ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರಲ್ಲಿ ಪಾಲಿಕೆ ಮನವಿ ಮಾಡಿದೆ. ಜತೆಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಎಲ್ಲಾ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.