Advertisement
ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ “ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ’ ಎಂದು ಹೇಳಿ ಮುಜುಗರಕ್ಕೀಡು ಮಾಡಿದ್ದ. ಈ ಪ್ರಕರಣವನ್ನು ಉಲ್ಲೇಖಿಸಿ ಪತ್ರ ಬರೆದಿರುವ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಇಂತಹ ಮುಜುಗರಕ್ಕೀಡಾಗುವ ಪ್ರಸಂಗವನ್ನು ಶಿಕ್ಷಕರು ಪ್ರತೀ ದಿನ ಎದುರಿಸುತ್ತಿದ್ದು, ಈ ರೀತಿ ಕಿರುಕುಳ ನೀಡುವ ಮಕ್ಕಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ನೀಡಬೇಕು ಎಂದು ಕೋರಿದ್ದಾರೆ.
ಇತ್ತೀಚಿನ ದಿನಗಳಲ್ಲಿ 2 ವರ್ಷದ ಮಗುವಿನ ಬಾಯಲ್ಲಿ ಅವಾಚ್ಯ ಶಬ್ದಗಳನ್ನು ಮಾತನಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಇದು ಇತರ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಇಂತಹ ವರ್ತನೆ ಬಗ್ಗೆಯೂ ಸರಕಾರ, ಶಿಕ್ಷಣ ಇಲಾಖೆ, ಮಕ್ಕಳ ಹಕ್ಕು ಆಯೋಗ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಖಂಡನೀಯ ಎಂದು ಒಕ್ಕೂಟ ಹೇಳಿದೆ.
Related Articles
ವಿದ್ಯಾರ್ಥಿಗಳ ಇಂತಹ ವರ್ತನೆ ಸರಿ ಎಂಬ ರೀತಿಯಲ್ಲೇ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಸಮರ್ಥಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಇವುಗಳನ್ನು ಬಳಕೆ ಮಾಡುತ್ತಿರುವುದು ಖಂಡನೀಯ. ಶಿಕ್ಷಕರ ಕ್ಷೇತ್ರದ ಪ್ರತಿನಿಧಿಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
Advertisement
-ಶಾಲೆಗಳಲ್ಲಿ ದುರ್ವರ್ತನೆ ತೋರುವ ಮಕ್ಕಳ ಮೇಲೆ ಕ್ರಮ ಕೈಗೊಳ್ಳಲು ನಿಯಮ ರೂಪಿಸಿ-ಶಿಕ್ಷಕರ ಅಸಹಾಯಕತೆ ದೂರ ಮಾಡಲು ಕ್ರಮಕ್ಕೆ ಆದೇಶಿಸಲು ಸಿಎಂಗೆ ಮನವಿ
-ಪಾಲಕರು, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳ ವರ್ತನೆ ಬಗ್ಗೆಯೂ ಒಕ್ಕೂಟದ ಆತಂಕ ಕನಿಷ್ಠ ಕ್ರಮ ಕೈಗೊಳ್ಳಲು ಅವಕಾಶ ಕೊಡಿ
ದುರ್ವರ್ತನೆ ತೋರುವ ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ಒಳ್ಳೆಯ ಉದ್ದೇಶದಿಂದ ಕನಿಷ್ಠ ತಿಳಿವಳಿಕೆ ಹಾಗೂ ಕ್ರಮ ತೆಗೆದುಕೊಳ್ಳುವುದು ಅಪರಾಧವಲ್ಲ ಎಂಬ ನ್ಯಾಯಾಲಯಗಳ ಅಭಿಪ್ರಾಯವನ್ನು ಪರಿಗಣಿಸಿ ಮಕ್ಕಳ ಮೇಲೆ ಕ್ರಮ ಕನಿಷ್ಠ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು. ತಪ್ಪೆಸಗಿದ ವಿದ್ಯಾರ್ಥಿಗಳಿಂದ ಕನಿಷ್ಠ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲು ಶಿಕ್ಷಕರಿಗೆ ಅಧಿಕಾರ ನೀಡಬೇಕು ಎಂದು ಆಗ್ರಹಿಸಲಾಗಿದೆ.