Advertisement

ಮಾಹಿತಿ ಬದಲಾವಣೆಗೆ ಅವಕಾಶ

11:14 PM May 31, 2019 | Lakshmi GovindaRaj |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಿರುವ ಮಾಹಿತಿಯನ್ನು ಮಾರ್ಪಾಡು ಮಾಡಲು ಕೊನೆಯ ಅವಕಾಶ ಕಲ್ಪಿಸಲಾಗಿದೆ.

Advertisement

ಅಭ್ಯರ್ಥಿಗಳ ಮನವಿ ಮೇರೆಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2019ರ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್‌ ಮೂಲಕ ಸಲ್ಲಿಸಿರುವ ಅರ್ಜಿಗಳಲ್ಲಿನ ಮಾಹಿತಿಗಳನ್ನು ಮಾರ್ಪಡಿಸಲು ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ.

ಜೂನ್‌ 5ರ ಸಂಜೆ 5.30ರ ವರೆಗೆ ಬದಲಾಯಿಸಲು ಅವಕಾಶ ಇದೆ. . ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ //kea.kar.nic.in ನೋಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next