Advertisement

ತಿರಸ್ಕೃತ ಅರ್ಜಿಗಳ ಮರು ಪರಿಶೀಲನೆಗೆ ಅವಕಾಶ’

11:18 PM May 03, 2019 | Team Udayavani |

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಅನುಸೂಚಿತ ಬುಡಕಟ್ಟುಗಳು ಹಾಗೂ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಪತ್ರ ಸಂಬಂಧ ತಿರಸ್ಕೃತವಾಗಿರುವ 1894 ಅರ್ಜಿಗಳನ್ನು ಮರು ಪರಿಶೀಲಿಸಲು ಅವಕಾಶವಿದ್ದು, ಈ ಸಂಬಂಧ ಮನವಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 3,623 ಅರ್ಜಿಗಳು ಸ್ವೀಕೃತಗೊಂಡಿದ್ದು, ಇದರಲ್ಲಿ 1727 ಅರ್ಜಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ವಿತರಿಸಲಾಗಿದೆ. ಉಳಿದಂತೆ 1894 ಅರ್ಜಿಗಳು ತಿರಸ್ಕೃತಗೊಂಡಿವೆ. ಇವುಗಳನ್ನು ಮರು ಪರಿಶೀಲಿಸಲು ಅವಕಾಶವಿದ್ದು, ಈ ಬಗ್ಗೆ ಸಂಬಂಧಪಟ್ಟವರು ಮನವಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಸಂಬಂಧಪಟ್ಟ ಇಲಾಖೆಯವರು ಬಸವನಹಳ್ಳಿಯಲ್ಲಿ 138 ಮನೆಗಳು ಪೂರ್ಣಗೊಂಡಿದ್ದು, 127 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನು 60 ಮನೆಗಳನ್ನು ನಿರ್ಮಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು. 138 ಕುಟುಂಬಗಳಲ್ಲಿ 6 ಕುಟುಂಬಗಳು ಹೊರತುಪಡಿಸಿ ಉಳಿದವರು ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಹಿಂದೆ ಬಿದ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ, ಹೆಚ್ಚಿನ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಮಾಡುವಂತಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಜೊತೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

Advertisement

ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಾಗರಹೊಳೆ ವ್ಯಾಪ್ತಿಯ 5 ಹಾಡಿಗಳು ಹೊರತು ಪಡಿಸಿ ಉಳಿದ ಹಾಡಿಗಳಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ದೊರೆಯದ ಕಾರಣ ಯಾವುದೇ ಮೂಲ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್‌ ತಿಳಿಸಿದರು. ಸೆಸ್ಕ್ ಇಲಾಖೆ ಎಇಇ ದೇವಯ್ಯ, ತಾ.ಪಂ.ಇಒ ಜಯಣ್ಣ, ಡಾ.ಕೆ.ಮೋಹನ್‌, ಡಾ. ಶಿವಕುಮಾರ್‌, ಸಮಾಜ ಚಿಕ್ಕಬಸವಯ್ಯ(ಮಡಿಕೇರಿ), ಚಂದ್ರಶೇಖರ್‌(ವಿರಾಜಪೇಟೆ), ಶೇಖರ್‌(ಸೋಮವಾರಪೇಟೆ), ರಂಗನಾಥ್‌ ಮೊದಲಾದವರು ಈ ಸಂದರ್ಭ‌ದಲ್ಲಿ ಉಪಸ್ಥಿತರಿರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next