Advertisement

25ವರ್ಷಕ್ಕಿಂತ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆಗೆ ಅನುಮತಿ ಕೋರಿ ಪ್ರಧಾನಿಗೆ ‘ಮಹಾ’ ಸಿಎಂ ಪತ್ರ

09:55 PM Apr 05, 2021 | Team Udayavani |

ಮುಂಬೈ: 25 ವರ್ಷ ವಯಸ್ಸಿಗಿಂತ ಹೆಚ್ಚಿನವರಿಗೆ ಕೋವಿಡ್ ಲಸಿಕೆ ನೀಡಲು ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿರುವ ಹಿನ್ನೆಲೆ ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಠಾಕ್ರೆ, 25 ವರ್ಷ ವಯಸ್ಸು ಮೆಲ್ಪಟ್ಟವರಿಗೂ ಲಸಿಕೆ ನೀಡಲು ಅನುಮತಿ ನೀಡಿ ಎಂದು ಕೇಳಿಕೊಂಡಿದ್ದಾರೆ. ಇದೇ ವೇಳೆ 45 ವರ್ಷ ವಯೋಮಾನ ದಾಟಿದವವರಿಗೆಲ್ಲರಿಗೂ ಕೋವಿಡ್ ಲಸಿಕೆ ನೀಡಲು ತಾವು ಮಾಡಿದ ಮನವಿಗೆ ಸ್ಪಂದಿಸಿರುವ ಮೋದಿಗೆ ಉದ್ಧವ್ ಠಾಕ್ರೆ ಧನ್ಯವಾದ ತಿಳಿಸಿದ್ದಾರೆ.

ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ವಾರಾಂತ್ಯದ ಲಾಕ್‍ಡೌನ್ ಹಾಗೂ ರಾತ್ರಿ ಕರ್ಪ್ಯೂನಂತಹ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಕ್ಷೇತ್ರಗಳ ಮೇಲೆಯೂ ನಿರ್ಬಂಧ ಹೇರಿದ ಹಿನ್ನೆಲೆ ಇಂದು ರಾತ್ರಿ 8 ಗಂಟೆಯಿಂದ ಪ್ರಸಿದ್ಧ ಶಿರಡಿ ಸಾಯಿಬಾಬಾ ದೇವಾಲಯ ಕೂಡ ಬಂದ್ ಆಗಿದೆ. ಮುಂದಿನ ಆದೇಶದವರೆಗೆ ದೇವಾಲಯದ ಬಾಗಿಲು ಮುಚ್ಚಲಾಗುವುದು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ.

ಇನ್ನು ಭಾನುವಾರ ನಡೆದ ಸಭೆಯಲ್ಲಿ ತಿಳಿಸಿರುವಂತೆ ಇಂದು ಮಹಾರಾಷ್ಟ್ರ, ಪಂಜಾಬ್ ಹಾಗೂ ಛತ್ತೀಸಗರ್ ರಾಜ್ಯಗಳಿಗೆ 50 ಮಂದಿ ಉನ್ನತ ಮಟ್ಟದ ಸಾರ್ವಜನಿಕ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿವೆ. ಈ ತಂಡಗಳು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕುರಿತು ಅಧ್ಯಯನ ನಡೆಸಲಿವೆ.

Advertisement

Udayavani is now on Telegram. Click here to join our channel and stay updated with the latest news.

Next