ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ ತಡರಾತ್ರಿ 10 ಗಂಟೆವರೆಗೆ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಅವಧಿ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿದೆ. ಅದೇ ಅವಧಿ ಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು. ಈ ಸಂದ ರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊv ಬಾರದು ಎಂದ ಅವರು, ಕೆಲವೊಂದು ಮಾರ್ಗ ಸೂಚಿಗಳನ್ನು ಸಾರ್ವಜನಿಕರು ಅನುಸರಿಸಬೇಕು ಎಂದರು.
ಏನಿದು ಮಾರ್ಗಸೂಚಿಗಳು?: ನಗರದಲ್ಲಿ ಹಸಿರು ಪಟಾಕಿ ಗಳನ್ನು ಖರೀದಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು. ಹಸಿರು ಪಟಾಕಿ ಖರೀದಿಸುವಾಗ ಅದರ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಖಚಿತ ಪಡಿಸಿಕೊಳ್ಳಬೇಕು. ಚಿಕ್ಕ ಮಕ್ಕಳು ಪಟಾಕಿ ಹಚ್ಚುವಾಗ ಅವರ ಪೋಷಕರೂ ಜತೆಯಲ್ಲಿರಬೇಕು. ಮೊದಲ ಪ್ರಯತ್ನದಲ್ಲಿ ಸಿಡಿಯದ ಪಟಾಕಿ ಗಳನ್ನು ಹತ್ತಿರಕ್ಕೆ ಹೋಗಿ ಮತ್ತೂಮ್ಮೆ ಪರೀಕ್ಷಿ ಸುವುದು ಬೇಡ. ಪಟಾಕಿ ಸಿಡಿಸುವಾಗ ಕೈಗಳಿಗೆ ಗ್ಲೌಸ್ ಧರಿಸಬೇಕು. ಕಣ್ಣುಗಳಿಗೆ ಸುರಕ್ಷತಾ ಕನ್ನಡಕಗಳನ್ನು ಧರಿಸಬೇಕು. ಯಾವುದಾದರೂ ಅವಘಡ ಗಳು ಸಂಭವಿಸಿದಲ್ಲಿ ತಕ್ಷಣವೇ 112 ಹಾಗೂ 108 ಸಂಪರ್ಕಿಸಬೇಕು. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾರ್ಗಸೂಚಿ ಹೊರಡಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ಹಾಗೂ ಇತರರು ಇದ್ದರು.
72 ಮೈದಾನದಲಿ ಪಟಾಕಿ ಮಾರಾಟಕ್ಕೆ ಅವಕಾಶ: ದೀಪಾವಳಿ ಹಬ್ಬದ ಅಂಗವಾಗಿ ನಗರದ 72 ಮೈದಾನದಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಾರಾಟಕ್ಕೆ ಅನು ಮತಿ ನೀಡಲಾಗಿದೆ. ಚಿಲ್ಲರೆ ಪಟಾಕಿ ಪರ ವಾನಗಿ ಪಡೆಯಲು ಆನ್ಲೈನ್ ಮೂಲಕ 1,518 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ 315 ಪರ ವಾನಗಿ ನೀಡಲಾಗಿದೆ. ಸುರಕ್ಷತಾ ಕ್ರಮ ತೆಗೆದು ಕೊಳ್ಳುವಂತೆ ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದರು.