Advertisement
ಕನ್ನಡ ಹೊರತುಪಡಿಸಿ ಹಿಂದಿ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಯನ್ನು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಎಸೆಸೆಲ್ಸೆ ಪರೀಕ್ಷೆ ಬರೆಯಲು ನಗರದ ವಿದ್ಯಾಭಾರತಿ ಖಾಸಗಿ ಶಾಲೆಯ 10ನೇ ತಗರತಿ ವಿದ್ಯಾರ್ಥಿಗೆ ಅವಕಾಶ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು.
ವಿದ್ಯಾಭಾರತಿ ಖಾಸಗಿ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಸ್ಕೃತ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ವ್ಯಾಸಂಗ ಮಾಡಲು ಶಾಲೆಯ ಅನುಮತಿ ಪಡೆದುಕೊಂಡಿದ್ದ. ಆದರೆ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಶಾಲೆ ಸೂಚಿಸಿತ್ತು. ತನ್ನ ಮಗನ ಪ್ರಾರ್ಥಮಿಕ ಶಿಕ್ಷಣ ಕರ್ನಾಟಕದ ಹೊರ ಭಾಗಗಳಲ್ಲಿ ನಡೆದಿದೆ. ಹೀಗಾಗಿ ಅವರಿಗೆ ಕನ್ನಡ ಭಾಷಾ ಜ್ಞಾನವಿಲ್ಲ. ಆದ್ದರಿಂದ ಕನ್ನಡ ಹೊರತುಪಡಿಸಿ ಇತರ ಭಾಷಾ ವಿಷಯಗಳಲ್ಲಿ(ಹಿಂದಿ, ಸಂಸ್ಕೃತ ಮತ್ತು ಇಂಗ್ಲೀಷ್) ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಿದ್ಯಾರ್ಥಿಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಪರೀಕ್ಷಾ ಮಂಡಳಿ ಮೇಲ್ಮನವಿ ಸಲ್ಲಿಸಿತ್ತು.