Advertisement

Hijab ಧರಿಸಿ ಪರೀಕ್ಷೆ ಬರೆಯಲು ಅವಕಾಶ ?

11:19 PM Oct 21, 2023 | Team Udayavani |

ಬೆಂಗಳೂರು: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವ ವಿಷಯದಲ್ಲಿ ಸಮಸ್ಯೆ ಸೃಷ್ಟಿ ಮಾಡಲೇಬೇಕು ಎಂಬವರಿಗೆ ನಾವು ಉತ್ತರ ಕೊಡಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಸ್ವಾತಂತ್ರ್ಯ ದೃಷ್ಟಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಸಮಸ್ಯೆ ಸೃಷ್ಟಿ ಮಾಡಲು ಕೆಲವರು ಇರುತ್ತಾರೆ ಅವರನ್ನು ಕೇಳಿ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಹೇಳಿದ್ದಾರೆ.

Advertisement

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆದ ಬಳಿಕ ಅವರು ಮಾತನಾಡಿದರು.

ಹಿಜಾಬ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಆದೇಶ ಇರುವುದು ಕಾಲೇಜುಗಳಿಗೆ. ಈಗ ನಡೆಯುತ್ತಿರುವುದು ಬೋರ್ಡ್‌ ಪರೀಕ್ಷೆ. ನೀಟ್‌ ಪರೀಕ್ಷೆಯನ್ನು ಹಿಜಾಬ್‌ ಧರಿಸಿ ಬರೆಯಲು ಅವಕಾಶವಿದೆ. ನಮ್ಮ ಕೆಇಎ ನಡೆಸುತ್ತಿರುವ ಪರೀಕ್ಷೆಯಲ್ಲಿ ಒಂದು ಗಂಟೆ ಮುಂಚೆ ಬಂದು ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ. ಕೆಲವರು ಬೇರೆ ಕಾರಣಗಳನ್ನು ಮುಂದಿಟ್ಟು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರಬಹುದು. ಎಲ್ಲರಿಗೂ ಅವರ ಇಚ್ಛೆಯಂತೆ ಬಟ್ಟೆ ಧರಿಸುವ ಅವಕಾಶವಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next