Advertisement

High Court: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ

10:42 AM Nov 07, 2024 | Team Udayavani |

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ 28 ವಾರಗಳ ಗರ್ಭಧರಿಸಿರುವ 13 ವರ್ಷದ ಅಪ್ರಾಪೆ¤ಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ. “ವೈದ್ಯಕೀಯ ಗರ್ಭಪಾತ ಸಮಾಪನ ಅಧಿನಿಯಮ-1971ರ ನಿಯಮಗಳಂತೆ ಅಪ್ರಾಪ್ತೆಯ ಗರ್ಭಪಾತ ಪ್ರಕ್ರಿಯೆ ಕೈಗೊಳ್ಳುವಂತೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಚೀಫ್ ಸರ್ಜ ನ್‌(ಮುಖ್ಯ ಶಸ್ತ್ರಚಿಕಿತ್ಸಕ)ಗೆ ನಿರ್ದೇ ಶನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

Advertisement

ಅಲ್ಲದೆ, ಸರ್ಕಾರದ ವೆಚ್ಚದಲ್ಲಿ ಗರ್ಭಪಾತ ಪ್ರಕ್ರಿಯೆ ನಡೆಯಬೇಕು ಎಂದು ಹೈಕೋರ್ಟ್‌ ಹೇಳಿದೆ. ತನ್ನ 13 ವರ್ಷದ ಮಗಳಿಗೆ ಗರ್ಭ ಪಾತ ನಡೆಸುವಂತೆ ವಾಣಿವಿಲಾಸ ಆಸ್ಪತ್ರೆ ವೈದ್ಯರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯ ಪೀಠ ಈ ಆದೇಶ ನೀಡಿ ಅರ್ಜಿ ಇತ್ಯರ್ಥ ಪಡಿಸಿದೆ. ತಜ್ಞ ವೈದ್ಯರ ವೈದ್ಯಕೀಯ ಮಂಡಳಿಯ ವರದಿ ಆಧರಿಸಿ ಹೈಕೋರ್ಟ್‌ ಈ ಆದೇಶ ನೀಡಿದೆ.

ಸಂತ್ರಸ್ತೆಯ ಜೀವಕ್ಕೆ ಹಾನಿಯಾಗದಂತೆ ಗರ್ಭಪಾತ ಮಾಡುವ ಸಂಬಂಧ ವೈದ್ಯರಿಂದ ಅಗತ್ಯ ಪರೀಕ್ಷೆಗಳ ಬಳಿಕ ನಿರ್ಧರಿಸಿ ಕ್ರಮಕ್ಕೆ ಮುಂದಾಗಬೇಕು. ಈ ಪ್ರಕ್ರಿಯೆಯಲ್ಲಿ ವೈದ್ಯಕೀಯ ಗರ್ಭಪಾತ ನಿಯಮಗಳು 1971ರ ಪ್ರಕಾರ ವೈದ್ಯಕೀಯ ಗರ್ಭಪಾತದ ಕಾರ್ಯದ ಚಿಕಿತ್ಸೆಯನ್ನು ಸಂತ್ರಸ್ತೆಯಿಂದ ಹಣ ಪಡೆದುಕೊಳ್ಳದೆ ಸರ್ಕಾರಿ ವೆಚ್ಚದಲ್ಲಿ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಕೈಗೊಳ್ಳ ಬೇಕು ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೆ, ಗರ್ಭಪಾತ ಮಾಡಿದ ಭ್ರೂಣವನ್ನು ಡಿಎನ್‌ಎ ಪರೀಕ್ಷೆಗೆ ಅನುಕೂಲವಾಗುವಂತೆ ಸಂರಕ್ಷಿಸಿ ಅದರ ಅಂಗಾಂಶ ಮಾದರಿಯನ್ನು ಡಿಎನ್‌ಎ ಪರೀಕ್ಷೆಗಾಗಿ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಬೇಕು. ಸಂತ್ರಸ್ತೆಗೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಕ್ಕೆ ವಾಹನ ವ್ಯವಸ್ಥೆ ಮಾಡುವಂತೆ ಚಂದ್ರಾಲೇಔಟ್‌ ಪೊಲೀಸರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಸಂತ್ರಸ್ತೆಯ ವೈದ್ಯಕೀಯ ಚಿಕಿತ್ಸೆ ಹಾಗೂ ಮುಂದಿನ ಆರೋಗ್ಯ ಸುಧಾರಣೆ ನಿರ್ವಹಣೆಗೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂತ್ರಸ್ತೆಗೆ ಪಾವತಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ. ಪ್ರಕರಣ ಸಂಬಂಧ ಕೋರ್ಟ್‌ ಆದೇಶ ಪಾಲಿಸಿದ ಬಗ್ಗೆ 2 ವಾರಗಳಲ್ಲಿ ವರದಿ ನೀಡುವಂತೆ ಚಂದ್ರಾಲೇಔಟ್‌ ಪೊಲೀಸರಿಗೆ, ವಾಣಿ ವಿಲಾಸ ಆಸ್ಪತ್ರೆ ವೈದ್ಯಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳಿಗೆ ನ್ಯಾಯಪೀಠ ಸೂಚಿಸಿದೆ.

Advertisement

ಪುತ್ರಿ ಗರ್ಭಿಣಿಯಾಗಿದ್ದು ಗೊತ್ತಾದ ತಕ್ಷಣ ಆಕೆಯ ತಾಯಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದರು. ಜತೆಗೆ, ಸಂತ್ರ ಸ್ತೆಗೆ ಗರ್ಭಪಾತ ನಡೆಸಲು ವಾಣಿವಿಲಾಸ ಆಸ್ಪತ್ರೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next