Advertisement
ರಾಜ್ಯಪಾಲರ ವಜಾಕ್ಕೆ ಖಂಡ್ರೆ ಒತ್ತಾಯ
Related Articles
Advertisement
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪುರ ಆರೋಪಿಸಿದ್ದಾರೆ.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ. ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.
ರಾಜ್ಯಪಾಲರ ವಿರುದ್ದ ಕಾನೂನು ಹೋರಾಟ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ಟೀಕಾ ಪ್ರಹಾರ ನಡೆಸಿರುವ ಸಚಿವ ಶಿವಾನಂದ ಪಾಟೀಲ, ರಾಜ್ಯಪಾಲರ ನಡೆಯ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದರು.
ರಾಜ್ಯಪಾಲರ ಎದುರು ಬಿಜೆಪಿ ನಾಯಕರ ಹಲವು ಹಗರಣಗಳ ಪ್ರಕರಣಗಳು ಬಾಕಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತ್ರ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದರೊಂದಿಗೆ ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮೋದಿ, ಶಾ ಹೇಳಿದಂತೆ ರಾಜ್ಯಪಾಲರು ಕುಣಿತ: ತಂಗಡಗಿ
ಕೊಪ್ಪಳ: ಮೋದಿ, ಅಮಿತ್ ಶಾ ಅವರ ಕೈಗೊಂಬೆಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ. ಬಲಿಷ್ಠ ಸರಕಾರ ಅಸ್ಥಿರಗೊಳಿಸಲು ಹೊರಟಿದ್ದಾರೆ. ಮೊದಲು ರಾಜ್ಯಪಾಲರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದರು.
ಸಂವಿಧಾನವನ್ನು ಹತ್ತಿಕ್ಕುವ ಕೆಲಸ ಕೇಂದ್ರದಿಂದ ನಡೆಯುತ್ತಿದೆ. ಸಿಎಂ ವಿರುದ್ದ ರಾಜ್ಯಪಾಲರ ಪ್ರಾಸಿಕ್ಯೂಷನ್ ಕೊಟ್ಟಿದ್ದಾರೆ. ಅಮಿತ್ ಶಾ, ಮೋದಿ 136 ಜನ ಶಾಸಕರ ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅನುಮತಿ ಅನಿರೀಕ್ಷಿತವಲ್ಲ: ಬಿ.ಆರ್ ಪಾಟೀಲ್
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ನಮಗೇನು ಅನಿರೀಕ್ಷಿತ ಅಲ್ಲ ಎಂದು ಸಿಎಂ ಸಲಹೆಗಾರ, ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆಂದು ಗೊತ್ತಿತ್ತು? ಇದಕ್ಕೆ ನಾವೇನೂ ಹೆದರೋದಿಲ್ಲ, ಸಿಎಂ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿರುದ್ದ ನಾವು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ, ಕಾನೂನು ಹೋರಾಟ ಮಾಡುತ್ತೇವೆ. ರಾಜಕೀಯ ದುರುದ್ದೇಶದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದರು.