Advertisement

CM Siddaramaiah ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ

04:35 PM Aug 19, 2024 | Shreeram Nayak |

ತೀರ್ಥಹಳ್ಳಿ: ಈ ದೇಶವು ಪ್ರಜಾಪ್ರಭತ್ವ ಮತ್ತು ಸಂವಿಧಾನದ ಅಡಿಯಲ್ಲಿ ನಿರ್ಮಾಣವಾಗಿದ್ದು, ರಾಜ್ಯಪಾಲರು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಈ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

Advertisement

ಸೋಮವಾರ ಪಟ್ಟಣದ ತಾಲೂಕು ಕಚೇರಿ ಎದುರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮೇಲೆ ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿ ರಾಜ್ಯಪಾಲರು ಅನಗತ್ಯವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂಬ ಕಾರಣಕ್ಕೆ ಪ್ರತಿಭಟನೆ ನಡೆಸಿ ಮಾತನಾಡಿದರು.

ಈ ಪ್ರಕರಣ ರಾಜಕೀಯ ಒಳಗೊಂಡಂತೆ ಕಾಣುತ್ತಿದೆ. ಭಾರತದ ಸ್ವಾತಂತ್ರ್ಯ ದಿನದ ಮರು ದಿನವೇ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದು ಒಂದು ಷಡ್ಯಂತ್ರದ ಭಾಗವಾಗಿದ್ದು, ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ. ಹಾಗಾಗಿ ರಾಷ್ಟ್ರಪತಿಗಳು ತತ್‌ಕ್ಷಣದಲ್ಲಿ ಮಧ್ಯಸ್ಥಿಕೆ ವಹಿಸಿ ಕರ್ನಾಟಕದ ಮುಖ್ಯಮಂತ್ರಿಗಳ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯುವಂತೆ ತಿಳಿಸಬೇಕು ಎಂದು ಮನವಿ ಮಾಡಿದರು.

ರೈತರ ಹೋರಾಟಕ್ಕೆ ಬೆಂಬಲ-ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಆಗಮನ!?
ಒತ್ತುವರಿ ತೆರವು ವಿಚಾರದಲ್ಲಿ ನಡೆಯುತ್ತಿದ್ದ ಹಾಗೂ ರೈತರ ಇತರ ಸಮಸ್ಯೆಗಳಿಗೆ ನಮ್ಮ ಬೆಂಬಲ ಇದೆ. ನಾವು ಈ ಹೋರಾಟಕ್ಕೆ ಪ್ರಾರಂಭದಲ್ಲೂ ಕೂಡ ಬೆಂಬಲವನ್ನು ನೀಡುತ್ತಾ ಬಂದಿದ್ದೆವು.ನಿಮ್ಮ ಯೋಜನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ಎಲ್ಲಿಯವರೆಗೂ ಕಸ್ತೂರಿ ರಂಗನ್ ರಿಜೆಕ್ಟ್ ಆಗುವುದಿಲ್ಲವೋ ಅಲ್ಲಿಯವರೆಗೂ ಅದು ನಮಗೆ ಸಮಸ್ಯೆ ಆಗಲಿದೆ ಎಂದರು.

ಕಸ್ತೂರಿ ರಂಗನ್ ವರದಿ ಓವರ್ ಟೆಕ್ ಮಾಡುವ ಅಧಿಕಾರ ಯಾವ ರಾಜ್ಯ ಸರ್ಕಾರಕ್ಕೂ ಇಲ್ಲ.ಅದನ್ನು ಕಂಟ್ರೋಲ್ ಮಾಡುವುದು ಕಷ್ಟ.ಇದನ್ನು ತಡೆಯುವುದಕ್ಕೆ ಏನೇನು ಪ್ರಯತ್ನ ಮಾಡಲು ಸಾಧ್ಯವೊ ಅದನ್ನ ಮಾಡೋಣ. ಕವಿಶೈಲದಿಂದ ಫಾರೆಸ್ಟ್ ಆಕ್ಟ್ ವಿರುದ್ಧ ಹೋರಾಟ ಮಾಡಲು ಪಾದಯಾತ್ರೆ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಕೂಡ ಚರ್ಚೆ ಮಾಡುತ್ತೇನೆ. ಸಾಧ್ಯವಾದರೆ ಅವರನ್ನು ಕರೆತರಲು ನೋಡುತ್ತೇನೆ ಎಂದರು.

Advertisement

ರೈತರ ಹೋರಾಟದಲ್ಲಿ ಪ್ರತ್ಯಕ್ಷವಾಗಿ ಬರಲು ಆಗದಿದ್ದರೂ ಅಪ್ರತ್ಯಕ್ಷವಾಗಿಯಾದರೂ ಬೆಂಬಲ ಸೂಚಿಸುತ್ತಾ ಬಂದಿದ್ದೇನೆ. ಭೂಮಿ ಕಡಿಮೆಯಾಗುತ್ತಿದೆ ಜನಸಂಖ್ಯೆ ಜಾಸ್ತಿ ಆಗುತ್ತಿದೆ.ಜನಸಂಖ್ಯೆಗನುಗುಣವಾಗಿ ಸರ್ಕಾರಿ ಜಾಗದಲ್ಲಿಯೇ ಮನೆ ಕಟ್ಟಬೇಕಾಗುತ್ತದೆ ಅದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. 2015 ರ ನಂತರ ಒತ್ತುವರಿ ಮಾಡಿಕೊಂಡು ಅವರ ಸುದ್ದಿಗೆ ಬರುವುದಿಲ್ಲ ಎಂಬುದಾಗಿ ಈಗಾಗಲೇ ಭರವಸೆ ನೀಡಿದ್ದಾರೆ. ನಿಮ್ಮ ಎಲ್ಲಾ ಹೋರಾಟಕ್ಕೂ ನಿಮ್ಮ ಜೊತೆ ನಾನು ಇರುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next