ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಕಾಲ್ತುಳಿತಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ಮಂದಿರದ ಮಾಲಕ ಸೇರಿ ಚಿತ್ರ ತಂಡದ ಮೇಲೆ ಕೇಸ್ ದಾಖಲಾಗಿತ್ತು. ಅದರಂತೆ ಚಿಕ್ಕಡಪಲ್ಲಿ ಪೊಲೀಸರು ಇಂದು ಬೆಳಗ್ಗೆ ನಟನನ್ನು ಅರೆಸ್ಟ್ ಮಾಡಿದ್ದಾರೆ.
Related Articles
Advertisement
ಇನ್ನು ಅಲ್ಲು ಅರ್ಜುನ್ ಪೊಲೀಸರಿಗೆ ಮಾಹಿತಿ ನೀಡದೇ ಚಿತ್ರ ಮಂದಿರಕ್ಕೆ ಪ್ರವೇಶ ಮಾಡಿದ್ದು ಇದರಿಂದ ಭದ್ರತಾ ವ್ಯವಸ್ಥೆಗೆ ಬೇಕಾದಷ್ಟು ಮಂದಿ ಪೊಲೀಸ್ ಸಿಬಂದಿಗಳು ಇರದೇ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಅಲ್ಲು ಅರ್ಜುನ್ ಸೇರಿ, ಚಿತ್ರತಂಡ ಹಾಗೂ ಥಿಯೇಟರ್ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.
ಹೈಕೋರ್ಟ್ ಮೆಟ್ಟಿಲೇರಿದ್ದ ನಟ:ಇನ್ನು ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದತಿ ಕೋರಿ ನಟ ಅಲ್ಲು ಅರ್ಜುನ್ ಹೈಕೋರ್ಟ್ ಮೆಟ್ಟಿಲೇರಿದ್ದರು.