Advertisement

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

11:11 PM Dec 22, 2024 | Team Udayavani |

ಹೈದರಾಬಾದ್ : ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸದ ಮೇಲೆ ರವಿವಾರ(ಡಿ22 ) ಉಸ್ಮಾನಿಯಾ ವಿಶ್ವವಿದ್ಯಾಲಯದ ಹಲವಾರು ಸದಸ್ಯರು ನುಗ್ಗಿ ದಾಂಧಲೆ ನಡೆಸಿ ಆಸ್ತಿ ಹಾನಿ ಮಾಡಿದ್ದಾರೆ.

Advertisement

ಘಟನೆ ನಡೆದ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ನಿವಾಸದ ಸುತ್ತ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

ದಾಂಧಲೆ ನಡೆಸಿದವರು ಉಸ್ಮಾನಿಯಾ ವಿಶ್ವವಿದ್ಯಾಲಯದ Joint Action Committee (JAC) ಸದಸ್ಯರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ತಿಂಗಳ ಆರಂಭದಲ್ಲಿ ನಡೆದ “ಪುಷ್ಪ 2” ಪ್ರೀಮಿಯರ್‌ನಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲು ಅರ್ಜುನ್‌ ವಿರುದ್ಧ ಧಿಕ್ಕಾರ ಕೂಗಿ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ. ನಿವಾಸದ ಎದುರಿದ್ದ ಹೂಕುಂಡಗಳನ್ನು ಧ್ವಂಸ ಗೈದು ಮನೆಯೊಳಗೆ ನುಗ್ಗಲೂ ಪ್ರತಿಭಟನಾ ನಿರತರು ಯತ್ನಿಸಿದ್ದಾರೆ.

ಘಟನೆ ನಡೆದ ವೇಳೆ ನಟ ಅಲ್ಲು ಅರ್ಜುನ್ ಅವರು ನಿವಾಸದಲ್ಲಿ ಇರಲಿಲ್ಲ. ದಾಳಿಯ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಸಿಎಂ ರೇವಂತ್ ರೆಡ್ಡಿ ಸೇರಿ ಹಲವರ ಆರೋಪಗಳ ಮಧ್ಯೆ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವ ವೇಳೆ ಈ ಘಟನೆ ನಡೆದಿದೆ. ಅಭಿಮಾನಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ನಿಂದನೀಯ ಭಾಷೆ ಅಥವಾ ನಡವಳಿಕೆಯಿಂದ ದೂರವಿರಲು ಅಲ್ಲು ಅರ್ಜುನ್ ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ.

Advertisement

ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಅಲ್ಲು ಅರ್ಜುನ್ ಅವರು ಚಿತ್ರ ಮಂದಿರಕ್ಕೆ ಭೇಟಿ ನೀಡಿದ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಎಂಟು ವರ್ಷದ ಪುತ್ರ ಗಾಯಗೊಂಡು ಹೈದರಾಬಾದ್‌ನ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಅವಘಡಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರಕಾರ ಮತ್ತು ಸಿಎಂ ರೇವಂತ ರೆಡ್ಡಿ ಅವರು ಅಲ್ಲು ಅರ್ಜುನ್ ಅವರನ್ನು ನೇರ ಹೊಣೆಗಾರರನ್ನಾಗಿಸಿ ಕಲಾಪದಲ್ಲೇ ಟೀಕಾ ಪ್ರಹಾರ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next