Advertisement

ʼಪುಷ್ಪ-2ʼ ಟೀಸರ್‌ ಗೆ ಡೇಟ್‌ ಫಿಕ್ಸ್?‌ : ಅಲ್ಲು ಅಭಿಮಾನಿಗಳಿಗೆ ಡಬಲ್‌ ಧಮಾಕ

04:55 PM Feb 28, 2023 | Team Udayavani |

ಹೈದರಾಬಾದ್: ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅಭಿನಯಯದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಪುಷ್ಪ-2ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ರಿಲೀಸ್‌ ಗೂ ಮುನ್ನ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಮಾಡಿದೆ.

Advertisement

ಸುಕುಮಾರ್‌ ನಿರ್ದೇಶನದ ಬಿಗ್‌ ಬಜೆಟ್‌ ಸಿನಿಮಾದಲ್ಲಿ ಮೊದಲ ಭಾಗಕ್ಕಿಂತ ಹೆಚ್ಚು ಆ್ಯಕ್ಷನ್‌ ಹಾಗೂ ಥ್ರಿಲ್‌ ಇರಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಹಂತದಲ್ಲೇ ಸಿನಿಮಾ ತಂಡದಿಂದ ಅಪ್ಡೇಟ್‌ ವೊಂದು ಹೊರ ಬಿದ್ದಿದೆ.

ಇದನ್ನೂ ಓದಿ: ಸಿಎಸ್ ಕೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ಸ್

ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರ ಹುಟ್ಟುಹಬ್ಬಕ್ಕೆ ಅಂದರೆ ಏಪ್ರಿಲ್‌  8 ರಂದು ʼಪುಷ್ಪ-2ʼ ಸಿನಿಮಾದ ಟೀಸರ್‌ ರಿಲೀಸ್‌ ಆಗಲಿದೆ ಎನ್ನುವ ಬಗ್ಗೆ ವರದಿಯಾಗಿದೆ.  ನಾಯಕ ನಟನ ಹುಟ್ಟುಹಬ್ಬದಂದು ಟೀಸರ್‌ ರಿಲೀಸ್‌ ಮಾಡಲು ಪ್ಲ್ಯಾನ್ ಚಿತ್ರ ತಂಡ ಮಾಡಿಕೊಂಡಿದೆ ಎನ್ನಲಾಗಿದೆ.

ಸದ್ಯ ಅಲ್ಲು ಅರ್ಜುನ್‌ ಒಂದು ಹಂತದ ಶೂಟಿಂಗ್‌ ಮುಗಿಸಿ ರಾಜಸ್ಥಾನದಲ್ಲಿ ತನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ.

Advertisement

ಅಲ್ಲು ಅರ್ಜುನ್‌ ಬರ್ತ್‌ ಡೇ ದಿನ ಟೀಸರ್‌ ರಿಲೀಸ್‌ ಆದರೆ ಅಭಿಮಾನಿಗಳ ಪಾಲಿಗೆ ಡಬಲ್‌ ಖುಷಿ ಸಿಗಲಿದೆ. ಫಾಹದ್ ಫಾಸಿಲ್, ರಶ್ಮಿಕಾ ಮಂದಣ್ಣ ಮುಂತಾದ ಕಲಾವಿದರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next