Advertisement

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

08:56 PM Jun 17, 2024 | Team Udayavani |

ಹೈದರಾಬಾದ್ : ಭಾರೀ ನಿರೀಕ್ಷೆ ಮೂಡಿಸಿರುವ ‘ಪುಷ್ಪ 2′ ಚಿತ್ರ ತಂಡ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯ ಹೊಸ ದಿನಾಂಕವನ್ನು ಸೋಮವಾರ ಘೋಷಿಸಿದೆ. 2024 ಡಿಸೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಅಲ್ಲೂ ಅರ್ಜುನ್ ಅಭಿನಯದ ಚಿತ್ರ ಬಿಡುಗಡೆಯಾಗಲಿದೆ.

Advertisement

ಚಿತ್ರದ ಮುಂದೂಡಿಕೆಗೆ ವಿವರವಾದ ವಿವರಣೆಯನ್ನು ನೀಡಿದ್ದು, ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ಚಲನಚಿತ್ರವು ಅಪ್ರತಿಮ ಸಿನಿಮೀಯ ಅನುಭವವನ್ನು ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ತಮ್ಮ ಉದ್ದೇಶವಾಗಿದೆ. ಇದನ್ನು ಸಾಧಿಸಲು, ಚಿತ್ರ ಪೂರ್ಣಗೊಳ್ಳಲು ಹೆಚ್ಚಿನ ಸಮಯ ಬೇಕಾಗುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಪುಷ್ಪ 2′ ಕಳೆದ ಎರಡು ವರ್ಷಗಳಿಂದ ಭಾರೀ  ನಿರೀಕ್ಷೆ ಹುಟ್ಟಿಸಿರುವ ಚಿತ್ರಗಳಲ್ಲಿ ಒಂದು. ಜನಪ್ರಿಯತೆಯ ಉತ್ತುಂಗದಲ್ಲಿದ್ದು ಹಾಡುಗಳು ಮತ್ತು ಟೀಸರ್‌ಗಳು ಸೇರಿದಂತೆ ಅದರ ಎಲ್ಲಾ ರೀತಿಯಲ್ಲೂ ಮುಂಚೂಣಿಯಲ್ಲಿದೆ.

ಅಲ್ಲು ಅರ್ಜುನ್ ಅವರೊಂದಿಗೆ ರಶ್ಮಿಕಾ ಮಂದಣ್ಣ ‘ಪುಷ್ಪಾ 2: ದಿ ರೂಲ್’ ನಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಫಹದ್ ಫಾಸಿಲ್, ಸುನೀಲ್, ರಾವ್ ರಮೇಶ್, ಅನಸೂಯಾ ಭಾರದ್ವಾಜ್ ಮತ್ತು ಜಗದೀಶ್ ಕೂಡ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

ಸುಕುಮಾರ್ ನಿರ್ದೇಶನದ ಪುಷ್ಪ: ದಿ ರೈಸ್ 2021 ರ ಡಿಸೆಂಬರ್ 17 ರಂದು ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next