Advertisement

ಕಲಬುರಗಿ ಪರಿಸ್ಥಿತಿ ಅವಲೋಕಿಸಿದ ಅಲೋಕ್‌

11:28 AM Dec 21, 2019 | Team Udayavani |

ಕಲಬುರಗಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದದ ಕಿಚ್ಚು ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ ಶುಕ್ರವಾರ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

Advertisement

ಶಾಂತಿ-ಸುವ್ಯವಸ್ಥೆ ಕಾಪಾಡಲು ಹಾಗೂ ಅಹಿತಕರ ಘಟನೆಗಳು ನಡೆಯಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಅಲೋಕ್‌ ಕುಮಾರ, ಮುಸ್ಲಿಂ ಚೌಕ್‌, ದರ್ಗಾ ಪ್ರದೇಶ, ಸಂತ್ರಾವಾಡಿ, ಗಣೇಶ ಮಂದಿರ, ಮೊಮಿನ್‌ಪುರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸಾರ್ವಜನಿಕರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿದರು. ಎಲ್ಲರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಯಾರೂ ಗಲಾಟೆ, ಹಿಂಸಾಚಾರದಲ್ಲಿ ತೊಡಬಾರದು ಎಂದು ಜನರಿಗೆ ತಿಳಿ ಹೇಳಿದರು. ಇದಕ್ಕೂ ಮುನ್ನ ಪೊಲೀಸ್‌ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಮಾಹಿತಿ ಪಡೆದುಕೊಂಡರು. ಜಿಲ್ಲಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗುರುವಾರ ನಿಷೇಧಾಜ್ಞೆ ನಡುವೆಯೂ ಹಲವು ಸಂಘಟನೆಗಳು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ್ದವು.

ಹೀಗಾಗಿ ರಾತ್ರಿಯೇ ಈಶಾನ್ಯ ವಲಯ ಐಜಿಪಿ ಮನೀಷ್‌ ಖರ್ಬಿಕರ್‌ ನೇತೃತ್ವದಲ್ಲಿ ಮುಖಂಡರೊಂದಿಗೆ ಸಭೆ ನಡೆಸಿ, ಪ್ರತಿಭಟನೆಗೆ ಇಳಿಯದಂತೆ ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಪರಿಸ್ಥಿತಿ ಹತೋಟಿಯಲ್ಲಿ ಇಟ್ಟುಕೊಳ್ಳಲು ಸರ್ಕಾರ ಕಲಬುರಗಿಯಲ್ಲಿ ಈ ಹಿಂದೆ ಎಸ್‌ಪಿ ಹಾಗೂ ಐಜಿಪಿ ಆಗಿ ಕಾರ್ಯ ನಿರ್ವಹಿಸಿರುವ ಅಲೋಕ್‌ ಕುಮಾರ ಅವರನ್ನು ಕಳುಹಿಸಿ ಕೊಟ್ಟಿದೆ. ನಗರ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ, ಉಪ ಆಯುಕ್ತ ಡಿ.ಕಿಶೋರ್‌ ಬಾಬು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next