Advertisement
ರಸ್ತೆಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ, ಈ ರಸ್ತೆಯಲ್ಲಿ ಗುಂಡಿಗಳ ದರ್ಬಾರೇ ಹೆಚ್ಚಾಗಿದೆ. ರಸ್ತೆಗೆ ಹಾಕಿದ್ದ ಎಲ್ಲಾ ಕಲ್ಲುಗಳು ಕಿತ್ತು ಆಳುದ್ದದ ಗುಂಡಿಗಳು ಬಿದ್ದಿವೆ. ಇಲ್ಲಿ ಸಂಚಾರ ಮಾಡಬೇಕೆಂದರೆ ಪ್ರಾಣವನ್ನೇ ಕೈಯಲ್ಲಿಟ್ಟುಕೊಂಡು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಮಳೆಗಾಲದಲ್ಲಿ ಓಡಾಡುವುದೇ ದುಸ್ಸಾಹಸವಾಗಿದೆ.
ಎಂಬ ಅನುಮಾನ ಸವಾರರಲ್ಲಿ ಮೂಡುತ್ತಿದೆ.
Related Articles
Advertisement
ಕಾಮಗಾರಿ ಪ್ರಾರಂಭಿಸುವ ಮನ್ಸೂಚನೆ ಕಾಣುತ್ತಿಲ್ಲ: ರಸ್ತೆ ಅಭಿವೃದ್ಧಿ ಕುರಿತು ಶಾಸಕರ ಗಮನಕ್ಕೆ ತಂದ ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಎರಡು ತಿಂಗಳಾದರೂ ರಸ್ತೆ ಕಾಮಗಾರಿ ಪ್ರಾರಂಭವಾಗುವ ಯಾವುದೇ ಮನ್ಸೂಚನೆ ಕಾಣುತ್ತಿಲ್ಲ. ಕುದೂರಿನ ಮುಖ್ಯ ರಸ್ತೆ ಅಭಿವೃದ್ಧಿ ಪಡಿಸುವುದಕ್ಕೆ ಇನ್ನೇಷ್ಟು ವರ್ಷ ಕಾಯಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರ ಮೇಲೆ ಕುದೂರು ಮುಖ್ಯ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಒತ್ತಡ ಏರಿ ಕಾಮಗಾರಿಯನ್ನು ಆರಂಭಿಸುವ ಕೆಲಸ ಮಾಡಬೇಕಿದ್ದ ಕುದೂರು ಗ್ರಾಪಂ, ಈ ವಿಷಯವಾಗಿ ಬೇಜವಾಬ್ದಾರಿ ತೋರಿದೆ. ಜನರ ಬಳಿ ಮತ ಕೇಳುವಾಗಿದ್ದ ಆಸಕ್ತಿಈಗಿಲ್ಲ. ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕಾಗಿ ಇದ್ದಂತಹ ಸಹಕಾರ, ಅಭಿವೃದ್ಧಿ ವಿಚಾರದಲ್ಲಿಲ್ಲ.ಅಧಿಕಾರಿಗಳಿಂದ ಕೆಲಸ ಮಾಡಿಸಿ, ಗ್ರಾಮೀಣ ಭಾಗದ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುವುದಕ್ಕೆ ಮನಸ್ಸಿಲ್ಲ. ಎರಡು ದಿನಗಳ ಹಿಂದೆ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಕುದೂರು ಮುಖ್ಯ ರಸ್ತೆ ಕಾಮಗಾರಿ ಆರಂಭಿಸುವಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಅವರು ಕಲಾವಕಾಶ ಕೇಳಿದ್ದಾರೆ. ಈ ವಾರದಲ್ಲಿ ಕಾಮಗಾರಿ ಪ್ರಾರಂಭ ಮಾಡದಿದ್ದರೆ, ಟೆಂಡರ್ ರದ್ದುಗೊಳಿಸಲಾಗುವುದು ಎಂದು ಸೂಚಿಸಿದ್ದೇವೆ.
● ರಾಮಣ್ಣ, ಎಇಇ,
ಲೋಕೋಪಯೋಗಿ ಇಲಾಖೆ ವೃದ್ಧರು, ಗರ್ಭಿಣಿಯರು ಚಿಕಿತ್ಸೆಗಾಗಿ ಪಟ್ಟಣದ ಆಸ್ಪತ್ರೆ ತೆರಳಲು ವಾಹನ ಚಾಲಕರು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕು ತ್ತಾರೆ. ಪ್ರಶ್ನಿಸದರೆ, ನಿಮ್ಮ ಊರಿನ ರಸ್ತೆ ಹದಗೆಟ್ಟಿದೆ ಎಂದು ದೂರುತ್ತಾರೆ. ಹದಗೆಟ್ಟ ರಸ್ತೆ ಸರಿಪಡಿಸುವಂತೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಿಲ್ಲ. ವರ್ಷಗಳಿಂದ ರಸ್ತೆ ಅವ್ಯವಸ್ಥೆಯಿಂದ ರೋಸಿ ಹೋಗಿದ್ದೇವೆ. ಆದರೂ, ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ.
● ನಟರಾಜು, ಸ್ಥಳೀಯ ನಿವಾಸಿ ಇನ್ನೊಂದು ವಾರದೊಳಗೆ ರಸ್ತೆ ಅಭಿವೃದ್ಧಿಪಡಿಸದೆ ಹೋದರೆ, ಗ್ರಾಮಸ್ಥರೆಲ್ಲಾ ಸೇರಿಕೊಂಡು ರಸ್ತೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ.
● ವಿವೇಕ್, ಕುದೂರು ನಿವಾಸಿ ರಸ್ತೆ ಅಭಿವೃದ್ಧಿ ಪಡಿಸುತ್ತೇವೆಂದು ಇದ್ದ ರಸ್ತೆಯನ್ನು ಹಾಳು ಮಾಡಿ, ವರ್ಷಗಳೇ ಕಳೆದರೂ ಇದಕ್ಕೆ ಮುಕ್ತಿ ದೊರಕಿಸಲಿಲ್ಲ. ರಸ್ತೆ ಕಿತ್ತು ಹಾಕಿರುವುದರಿಂದ ಧೂಳು ಕುಡಿದು ಕಾಯಿಲೆಗಳನ್ನು ಬರಸಿಕೊಳ್ಳಿ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ನಮಗೆ ನೀಡುತ್ತಿರುವ ಬಹುಮಾನ.
● ಬಿ.ಜಿ.ಕೃಷ್ಣಕುಮಾರ್, ಅಧ್ಯಕ್ಷ, ವರ್ತಕರ ಸಂಘ ● ಕೆ.ಎಸ್.ಮಂಜುನಾಥ್