Advertisement

ಸಮೀಕ್ಷೆ ಜತೆಗೆ ಮತದಾರರ ಪಟ್ಟಿಗೂ ಮಾಹಿತಿ ಸಂಗ್ರಹ

07:56 AM May 13, 2020 | Lakshmi GovindaRaj |

ಬೆಂಗಳೂರು: ಬಿಬಿಎಂಪಿಯ ಮನೆ- ಮನೆ ಆರೋಗ್ಯ ಸಮೀಕ್ಷೆ ವೇಳೆ ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಆರೋಗ್ಯ ಪರೀಕ್ಷೆ ಹಾಗೂ ಮಾಹಿತಿ ಪಡೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.  ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ನಗರದಲ್ಲಿ ನೆಲೆಸಿರುವವರಲ್ಲಿ ಹಲವರು ಬೇರೆ ಜಿಲ್ಲೆಗಳಿಂದ ಬಂದಿದ್ದಾರೆ.

Advertisement

ಅಲ್ಲದೆ, ಕೆಲವರ ಹೆಸರು ಮತದಾರ ಪಟ್ಟಿಯಲ್ಲಿ ಇಲ್ಲ. ಮತದಾರ ಪಟ್ಟಿಯಲ್ಲಿ ಹೆಸರು  ಇಲ್ಲದಿದ್ದರೂ, ಸಮೀಕ್ಷೆ ವೇಳೆ ಮಾಹಿತಿ ಪಡೆದುಕೊಳ್ಳುವಂತೆ ಆರೋಗ್ಯ ಸಮೀಕ್ಷಾ ತಂಡಗಳಿಗೆ ಸೂಚಿಸಲಾಗಿದೆ. ಆರೋಗ್ಯ ಸಮೀಕ್ಷಾ ತಂಡದ ಸಿಬ್ಬಂದಿ ಮಾಹಿತಿ ಕೇಳಿ ಬರುವ ವೇಳೆ ಸಾರ್ವ ಜನಿಕರು ತಮ್ಮ ಆರೋಗ್ಯ ದೃಷ್ಟಿಯಿಂದ  ಸಮಗ್ರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ತೀವ್ರ ಉಸಿರಾಟ ತೊಂದರೆ (ಎಸ್‌ ಎಆರ್‌ಐ) ಹಾಗೂ ಶೀತಜ್ವರ ಮಾದರಿ ಅನಾರೋಗ್ಯ (ಐಎಲ್‌ಐ) ಸಮಸ್ಯೆಗಳಿಂದ ಬಳಲುತ್ತಿರುವವರಲ್ಲೂ ಕೊರೊನಾ  ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತದಾರ ಪಟ್ಟಿ ಆಧರಿಸಿ ಮನೆ-ಮನೆಗೂ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಸಮೀಕ್ಷೆ ನಡೆಸಲು ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next