ಅಹಮದಾಬಾದ್ : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್‌ನ ಓಬಿಸಿ ಹೋರಾಟಗಾರ, ಕಾಂಗ್ರೆಸ್ ನಾಯಕ ಅಲ್ಪೇಶ್ ಠಾಕೂರ್ ಅವರು ಬಿಜೆಪಿ ಸೇರ್ಪಡೆಯಾಗಿ, ವಿಜಯ್ ರೂಪಾನಿ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎನ್ನಲಾಗಿದೆ.
ರಾಧಾನ್‌ಪುರ್ ಕ್ಷೇತ್ರದ ಶಾಸಕರಾಗಿರುವ ಅಲ್ಪೇಶ್ ಅವರು ಕಾಂಗ್ರೆಸ್ ತೊರೆದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಆದರೆ, ಈ ಸುದ್ದಿಗಳನ್ನು ಅಲ್ಪೇಶ್ ಅವರು ತಳ್ಳಿ ಹಾಕಿದ್ದು, ಇದೆಲ್ಲಾ ಸುಳ್ಳು ಸುದ್ದಿಗಳು ಎಂದಿದ್ದಾರೆ. ನಾಳೆ ಶುಕ್ರವಾರ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.
ಈ ಸುದ್ದಿಗಳ ಬೆನ್ನಲ್ಲೇ ಗಾಂಧಿನಗರದಲ್ಲಿರುವ ಸಚಿವಾಲಯದ ಕೊಠಡಿಗಳೆರಡನ್ನು ಸ್ವಚ್ಛಗೊಳಿಸಿರುವುದು ತಿಳಿದು ಬಂದಿದೆ.
ಅಲ್ಪೇಶ್ ಅವರು ಬಿಹಾರದ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದರು. ನನ್ನ ಸುಮುದಾಯದ ಜನರು ವಂಚಿತರಾಗುತ್ತಿದ್ದಾರೆ ಮತ್ತು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.