Advertisement

ಧಾರ್ಮಿಕ ಭಾವನೆಗಳಿಗೆ ಘಾಸಿ; ಆಲ್ಟ್ ನ್ಯೂಸ್ ಸಂಸ್ಥಾಪಕ ಜುಬೈರ್ ಬಂಧನ

08:42 AM Jun 28, 2022 | Team Udayavani |

ಹೊಸದಿಲ್ಲಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಫಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್‌ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ದೆಹಲಿ ಪೊಲೀಸರನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜುಬೈರ್ ನನ್ನು ಬಂಧಿಸಲಾಗಿದೆ.

Advertisement

ಜುಬೈರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295A (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಜುಬೈರ್ ಅವರನ್ನು ದೆಹಲಿಯ ಬುರಾರಿಯಲ್ಲಿರುವ ಡ್ಯೂಟಿ ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ ಹಾಜರುಪಡಿಸಲಾಯಿತು. ನಂತರ ಅವರನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು.

ಇದನ್ನೂ ಓದಿ:ಬಿಆರ್‌ಐ v/s ಬಿ3ಡಬ್ಲ್ಯು ! ಚೀನದ ಸಂಚಿಗೆ ಜಿ 7 ರಾಷ್ಟ್ರಗಳಿಂದ ತಿರುಗುಬಾಣ

ದೆಹಲಿ ಪೊಲೀಸ್‌ ನ ಐಎಫ್‌ಎಸ್‌ಒ (ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್) ಘಟಕವು ಜುಬೈರ್‌ನನ್ನು ಬಂಧಿಸಿದೆ. 2020 ರ ಪ್ರಕರಣದಲ್ಲಿ ವಿಚಾರಣೆಗಾಗಿ ಅವರನ್ನು ಇಂದು ಕರೆಸಲಾಯಿತು, ಆದರೆ ಈ ಪ್ರಕರಣವನ್ನು ತಕ್ಷಣವೇ ದಾಖಲಿಸಿದ ನಂತರ ಅವರನ್ನು ಬಂಧಿಸಲಾಯಿತು.

Advertisement

ಜುಬೈರ್ 2018 ರ ಟ್ವೀಟ್‌ನಲ್ಲಿ ಚಿತ್ರವನ್ನು ಪೋಸ್ಟ್ ಮಾಡಿ, ‘2014 ರ ಮೊದಲು: ಹನಿಮೂನ್ ಹೋಟೆಲ್. 2014 ರ ನಂತರ: ಹನುಮಾನ್ ಹೋಟೆಲ್’ ಎಂದು ಬರೆದಿದ್ದರು. ಈ ಪೋಸ್ಟ್ ಕುರಿತು ಟ್ವಿಟರ್ ಬಳಕೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ದೆಹಲಿ ಪೊಲೀಸರು ಪೋಸ್ಟ್ ಪರಿಶೀಲಿಸಿದ್ದು ,ಇದು ನಿರ್ದಿಷ್ಟ ಧರ್ಮದ ವಿರುದ್ಧದ ಚಿತ್ರಗಳು ಮತ್ತು ಪದಗಳನ್ನು ಒಳಗೊಂಡಿದೆ ಮತ್ತು ಹೆಚ್ಚು ಪ್ರಚೋದನಕಾರಿ ಮತ್ತು ಉದ್ದೇಶಪೂರ್ವಕವಾಗಿ ಮಾಡಲಾಗಿದೆ, ಇದು ಜನರ ನಡುವೆ ದ್ವೇಷವನ್ನು ಪ್ರಚೋದಿಸಲು ಸಾಕಾಗುತ್ತದೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next