Advertisement

ನ.2ಕ್ಕೆ “ಸಾಧಕರೊಂದಿಗೆ ಸಂವಾದ’ದಲ್ಲಿ ಆಳ್ವಾ ಭಾಗಿ

10:58 PM Oct 26, 2019 | Lakshmi GovindaRaju |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನ.2ರಂದು ನಗರದಲ್ಲಿ “ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದ್ದು, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಡಾ.ರಾಜಶೇಖರ ಹತಗುಂದಿ, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿರಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next