Advertisement

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

01:16 AM Oct 22, 2024 | Team Udayavani |

ಮಂಗಳೂರು: ರಾಜ್ಯದಲ್ಲಿ ಸುಮಾರು 3ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ನ.10ರಂದು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ “ಗದ್ದಿಗೆ’  ಕರಾವಳಿ ಮರಾಟಿ ಸಮಾವೇಶ 2024 ಆಯೋಜಿಸಲಾಗಿದೆ.

Advertisement

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾವೇಶ ಸಮಿತಿ ಅಧ್ಯಕ್ಷ, ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ ಎಚ್‌.ರಾಜೇಶ್‌ ಪ್ರಸಾದ್‌ ಅವರು, 22 ವರ್ಷಗಳ ಬಳಿಕ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧ್ಯೇಯದೊಂದಿಗೆ ಸಮಾವೇಶ ಆಯೋಜಿಸಲಾಗುತ್ತಿದೆ. ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಮರಾಟಿ ಸಮುದಾಯದ ಸುಮಾರು ಶೇ.80ರಷ್ಟು ಮಂದಿ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು, ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು. ಸುಮಾರು 15ರಿಂದ 20 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದು, “ಗದ್ದಿಗೆ’ ಸ್ಮರಣ ಸಂಚಿಕೆಯನ್ನು ಡಾ| ಎಂ. ಮೋಹನ್‌ ಆಳ್ವ ಬಿಡುಗಡೆ ಮಾಡಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ಸಮ್ಮಾನಿಸಲಾಗುವುದು. ಮರಾಟಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಗೋಷ್ಠಿಗಳು, ಉಪನ್ಯಾಸ ಹಾಗೂ ಸಮ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗಳು ನಡೆಯಲಿವೆ. ಸಂಪನ್ಮೂಲ ವ್ಯಕ್ತಿಗಳಾಗಿ ಡಾ| ಎಂ. ಮೋಹನ್‌ ಆಳ್ವ, ಎನ್‌.ಎಸ್‌.ಮಂಜುನಾಥ್‌, ರತಿ ಪ್ರಭಾಕರ ನಾಯ್ಕ, ಹಾಗೂ ಪ್ರವೀಣ್‌ ಕುಮಾರ್‌ ಮುಗುಳಿ ಭಾಗವಹಿಸಲಿದ್ದಾರೆ ಎಂದರು.

ನ.9ರಂದು ಉದ್ಯೋಗ ಮೇಳ
ಕರ್ನಾಟಕ ಮರಾಟಿ ಸಂಘ ಬೆಂಗಳೂರು ಸಹಕಾರದಲ್ಲಿ ನ.9ರಂದು ಬೆಳಗ್ಗೆ 9ರಿಂದ ಆಳ್ವಾಸ್‌ನಲ್ಲಿ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ 1,500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸಮಿತಿ ಪ್ರಮುಖರಾದ ಡಾ| ಕೆ.ಸುಂದರ್‌ ನಾಯಕ್‌, ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್‌.ವಿಶ್ವನಾಥ್‌ ನಾಯ್ಕ, ಮಹಾಲಿಂಗ ನಾಯ್ಕ, ಗೌತಮ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next