Advertisement
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾವೇಶ ಸಮಿತಿ ಅಧ್ಯಕ್ಷ, ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಅವರು, 22 ವರ್ಷಗಳ ಬಳಿಕ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧ್ಯೇಯದೊಂದಿಗೆ ಸಮಾವೇಶ ಆಯೋಜಿಸಲಾಗುತ್ತಿದೆ. ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಮರಾಟಿ ಸಮುದಾಯದ ಸುಮಾರು ಶೇ.80ರಷ್ಟು ಮಂದಿ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು, ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು. ಸುಮಾರು 15ರಿಂದ 20 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದರು.
ಕರ್ನಾಟಕ ಮರಾಟಿ ಸಂಘ ಬೆಂಗಳೂರು ಸಹಕಾರದಲ್ಲಿ ನ.9ರಂದು ಬೆಳಗ್ಗೆ 9ರಿಂದ ಆಳ್ವಾಸ್‌ನಲ್ಲಿ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ 1,500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸಮಿತಿ ಪ್ರಮುಖರಾದ ಡಾ| ಕೆ.ಸುಂದರ್ ನಾಯಕ್, ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್.ವಿಶ್ವನಾಥ್ ನಾಯ್ಕ, ಮಹಾಲಿಂಗ ನಾಯ್ಕ, ಗೌತಮ್ ಉಪಸ್ಥಿತರಿದ್ದರು.