Advertisement

ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

10:42 PM Oct 03, 2022 | Team Udayavani |

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ವು ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ `ಆಳ್ವಾಸ್ ನುಡಿಸಿರಿ-2022 ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

Advertisement

ಡಿ. 21 ರಿಂದ 27ರವರೆಗೆ ನಡೆಯುವ `ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ’ಯು ಐವತ್ತು ಸಾವಿರ ಪ್ರತಿನಿಧಿಗಳು ಮತ್ತು ಹತ್ತು ಸಾವಿರ ಅಧಿಕಾರಿ ವರ್ಗಗಳೊಂದಿಗೆ ನಮ್ಮ ನಿರೀಕ್ಷೆಯನ್ನೂ ಮೀರಿ ವಿಸ್ತಾರಗೊಳ್ಳುತ್ತಿದ್ದು ಈ ಎರಡು ಬೃಹತ್ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ನಿರ್ವಹಿಸಲು ಮತ್ತು ವ್ಯವಸ್ಥೆಗೊಳಿಸಲು ಕಷ್ಟವಾಗುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆಳ್ವಾಸ್ ನುಡಿಸಿರಿ ಕಾರ್ಯಕಾರಿ ಸಮಿತಿಯ ಪರವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next