Advertisement

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

01:01 AM May 29, 2024 | Team Udayavani |

ಉಡುಪಿ: ವಿಧಾನ ಪರಿಷತ್‌ ಚುನಾವಣೆಯ ನೈಋತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ. ರಘುಪತಿ ಭಟ್‌ ಅವರು ಮಂಗಳವಾರ ಶಿವಮೊಗ್ಗ ಗ್ರಾಮಾಂತರ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ ಹಾಗೂ ಚೆನ್ನಗಿರಿ ಭಾಗದಲ್ಲಿ ಮತಯಾಚನೆ ನಡೆಸಿದರು.

Advertisement

ದುಷ್ಕರ್ಮಿಗಳಿಂದ ದಾಳಿಗೊಳ ಗಾದ ಚನ್ನಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಘಟನೆಯ ವಿವರ ಪಡೆದು ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಿದರು. ಕಲ್ಲು ತೂರಾಟ ಹಾಗೂ ದಾಳಿಯಿಂದ ಕೆಲವು ಮಂದಿ ಪೊಲೀಸರು ಗಾಯಗೊಂಡಿದ್ದರು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿನ ಕಾನೂನು ಕ್ರಮ ಜರಗಿಸಬೇಕಾದ ಸರಕಾರ ಪೊಲೀಸ್‌ ಅಧಿಕಾರಿಗಳನ್ನೇ ಅಮಾನತುಗೊಳಿಸಿರುವುದನ್ನು ಖಂಡಿಸಿ
ದರು. ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧರಾಗಿರುವುದಾಗಿ ತಿಳಿಸಿದರು.

ಹೊನ್ನಾಳಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ವಾಲ್ಮೀಕಿ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ತಿಳಿಸಿದರು. ಹೊನ್ನಾಳಿ ನ್ಯಾಯಾಲಯ ಮತ್ತು ವಿವಿಧ ಭಾಗಗಳಲ್ಲಿ ಮತಯಾಚನೆ ನಡೆಸಿ, ಸವಳಂಗ ನ್ಯಾಮತಿ ಭಾಗದಲ್ಲಿಯೂ ಮತಯಾಚನೆ ನಡೆಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next