Advertisement
ವಾರಾಂತ್ಯದ ಸಂಗೀತ ಕಾರಂಜಿ: ಕಾಮಗಾರಿ ವೀಕ್ಷಿಸಿ ಮಾತನಾಡಿದ ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ಅಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ತುಮಕೂರಿನ ಹೆಮ್ಮೆ ಎಂದೇ ಬಿಂಬಿತವಾಗಿರುವ ಅಮಾನಿಕೆರೆ ಅಭಿವೃದ್ಧಿಗೆ ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್ ಯೋಜನೆ ರೂಪಿಸಿದೆ. ಯೋಜನೆಯಡಿ ಬೋಟಿಂಗ್ ಅಭಿವೃದ್ಧಿ, ಸೈಕಲ್ ಟ್ರ್ಯಾಕ್, ಪುಟ್ಪಾತ್ ಮತ್ತು ಮೋನೋರೈಲ್, ಕಾರ್ ಪಾತ್‌ವೇ ಅಭಿವೃದ್ಧಿ, ವಾಕಿಂಗ್ ಪಾತ್, ವಾರಾಂತ್ಯದ ಸಂಗೀತ ಕಾರಂಜಿ, ಮಕ್ಕಳ ಆಟಿಕೆ ಜಾಗ, ಮಕ್ಕಳಿಗೆ ಉದ್ಯಾನವನ, ಯೋಗಕೇಂದ್ರ, ಉದ್ಯಾನವನಕ್ಕೆ ಬಂದ ಪ್ರವಾಸಿಗರು ದೂರದಲ್ಲೇ ನಿಂತು ಪಕ್ಷಿಗಳ ಕಲರವ ಕೇಳಲು, ಪಕ್ಷಿಗಳಿಗೆ ಉತ್ತಮ ವಾಸಸ್ಥಾನ ಕಲ್ಪಿಸುವುದು ಹಾಗೂ ಅವುಗಳ ಸಂತಾನಾಭಿವೃದ್ಧಿ ಮಾಡಲು ದ್ವೀಪಗಳ ಅಭಿವೃದ್ಧಿ ಸೇರಿ ಸುಂದರ ಉದ್ಯಾನವನವಾಗಿ ಮಾಡಲು ಉದ್ದೇಶಿಸಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
Related Articles
Advertisement
ಇಂಟಿಗ್ರೇಟೆಡ್ ಕಮ್ಯಾಂಡ್ ಮ್ಯಾನೇಜ್‌ಮೆಂಟ್ ಕಂಟ್ರೋಲ್ (ಐಸಿಟಿಸಿ) ಗೆ ಭೇಟಿ ನೀಡಿ, ನಗರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ಹಾಗೂ ಟ್ರಾಫಿಕ್ ಸಿಗ್ನಲ್ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದ ಅವರು ಕೆಲವು ಸಲಹೆ-ಸೂಚನೆ ನೀಡಿದರು.
ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ. ಭೂಬಾಲನ್, ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್, ತುಮಕೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಯೋಗಾನಂದ, ತೋಟಗಾರಿಕೆ ಇಲಾಖೆ ಅಧಿಕಾರಿ ರಘು, ಸ್ಮಾರ್ಟ್‌ಸಿಟಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲೆrನ್ಸಿಯ ಅಧಿಕಾರಿಗಳು ಹಾಗೂ ತಾಂತ್ರಿಕ ಅಧಿಕಾರಿಗಳು ಇದ್ದರು.