Advertisement

ಅಮರಶಿಲ್ಪಿ ಜಕಣಾಚಾರಿ ಹೆಸರು ಅಮರ

07:07 PM Jan 02, 2021 | Team Udayavani |

ಕೋಲಾರ: ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು,ಸೂರ್ಯಚಂದ್ರ ಇರುವರೆಗೂ ಇವರ ಹೆಸರು ಅಮರವಾಗಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.

Advertisement

ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರು ಸಂಸ್ಮರಣಾ ದಿನಾರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ. ಇವರಲ್ಲಿ ವಿಷ್ಣುವರ್ಧನ ಅರಸನಕಾಲದಲ್ಲಿ ಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೆಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.

ಅದ್ಬುತ ಕಲಾಕೃತಿ: ಜಕಣಾಚಾರಿ ಅವರು ತಮ್ಮ ಇಡೀ ಜೀವನವನ್ನು ಶಿಲ್ಪ ಕಲೆಯ ಕೆತ್ತನೆಯಲ್ಲಿತೊಡಗಿಸಿಕೊಂಡಿದ್ದರು. ಜಕಣಾಚಾರಿ ಅವರ ಮಗ ಡಕಣಾಚಾರಿ ಅವರು ಸಹಶಿಲ್ಪಿಯಾಗಿದ್ದು, ಇವರು ಕಪ್ಪೆಚನ್ನಿಗರಾಯದೇವಸ್ಥಾನವನ್ನು ಅದ್ಭುತ ಕಲಾಕೃತಿಯಿಂದನಿರ್ಮಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕಸುಬು ಉಳಿಸಿ: ವಿಶ್ವಕರ್ಮ ಮಹಾಸಭಾದಜಿಲ್ಲಾಧ್ಯಕ್ಷ ಕಲಾವಿದ ವಿಷ್ಣು ಮಾತನಾಡಿ,ಒಳ್ಳೆಯ ಕೆಲಸ ಹಾಗೂ ಒಳ್ಳೆಯ ಸೇವೆಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿಉಳಿಯುತ್ತೇವೆ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಬೇಕು. ವಿಶ್ವ ಕರ್ಮಸಮುದಾ ಯವು ಪಂಚ ಕಸುಬುಗಳನ್ನು ಅವಲಂಬಿಸಿದ್ದು, ಇವುಗಳನ್ನು ಜೀವಂತವಾಗಿ ಉಳಿಸಿಕೊಂಡುಹೋಗಬೇಕು ಎಂದರು. ಇದೆ ಸಂದರ್ಭದಲ್ಲಿಕಲಾವಿದ ವಿಷ್ಣು ಸಂಪಾದಿಸಿರುವ ಅಮರಶಿಲ್ಪಿಜಕಣಾಚಾರಿ ಅವರ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ವಿಶಿಷ್ಟ ಸಾಧನೆಮಾಡಿರುವ ಸಮುದಾಯದವರಾದ ಎಸ್‌. ಮಂಜುನಾಥ ಚಾರ್ಯ, ಕೆ.ವೆಂಕಟರಮಣಚಾರ್ಯ, ಮಲ್ಲಿಕಾರ್ಜುನಚಾರ್ಯ, ಕೆ.ಗೋಪಾಲ ಚಾರ್ಯ ಹಾಗೂ ಚಂದ್ರಶೇಖರಾಚಾರ್ಯ ಅವರನ್ನುಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ವಿ.ಸ್ನೇಹ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next