Advertisement

ಅಮರ ಶಿಲ್ಪಿ ಜಕಣಾಚಾರಿ ಜಯಂತಿ

02:58 PM Jan 02, 2021 | Team Udayavani |

ಕಾರವಾರ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ಸರಕಾರಿ ಕಾರ್ಯಕ್ರಮವಾಗಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜನ್ಮದಿನವನ್ನು ಶುಕ್ರವಾರ ಆಚರಿಸಲಾಯಿತು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿ ಡಾ| ಕೆ. ಹರೀಶಕುಮಾರ್‌ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ದೀಪಬೆಳಗಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು. ಅವರ ಗುಣ ಮತ್ತುಬೆಳೆದು ಬಂದ ಪರಿಶ್ರಮದ ಘಟನೆಗಳನ್ನ ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುದು ಅತೀ ಮುಖ್ಯ ಎಂದರು.

ಅಮರ ಶಿಲ್ಪಿ ಜಕಣಾಚಾರಿ ಅವರನ್ನು ನಾವು ಇಂದು ನೆನೆಯುವ ಹಾಗೆ ಉತ್ತಮ ಜ್ಞಾನ ಮತ್ತು ಕಲಾತ್ಮಕ ಪ್ರವೃತ್ತಿ ರೂಢಿಸಿಕೊಂಡಿದ್ದೆ ಆದರೆ ಸಮಾಜ ನಮ್ಮನ್ನು ಸ್ಮರಿಸುವಂತಾಗುತ್ತದೆ ಎಂದುಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿಹೇಳಿದರು. ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next